ಕೇಂದ್ರದಿಂದ ಬ್ಲಾಕ್ ಫಂಗಸ್ ಔಷಧಿ; ಅಗತ್ಯಾನುಸಾರ ಜಿಲ್ಲೆಗಳಿಗೆ ವಿತರಣೆ : ಬಿಎಸ್ ವೈ

ಹುಬ್ಬಳ್ಳಿ, ಜೂ.5: ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬ್ಲಾಕ್ ಫಂಗಸ್ ಚಿಕಿತ್ಸೆಗಾಗಿ 9 ಸಾವಿರ ಅಂಪೆÇೀಟೆರಿಸಿನ್ ಬಿ ಔಷಧಿ ವೈಲ್ಸ್ ಹಂಚಿಕೆ ಮಾಡಲಾಗಿದೆ. ಅಗತ್ಯಾನುಸಾರ ಜಿಲ್ಲೆಗಳಿಗೆ ತ್ವರಿತವಾಗಿ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಧಾರವಾಡ ಜಿಲ್ಲೆಗೆ ಸಂಬಂಧಿಸಿದ ಕೋವಿಡ್ ಪಗ್ರತಿ ಪರಿಶೀಲನೆ ನಡೆಸಿದ ಅವರು, ನಿನ್ನೆ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಉತ್ತಮವಾಗಿದೆ. ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಕ್ಕಳಿಗಾಗಿ 600 ಆಕ್ಸಿಜನ್ ಬೆಡ್‍ಗಳನ್ನು ಮೀಸಲಿರಿಸಿದ್ದಾರೆ. ಕಿಮ್ಸ್‍ನ ತಾಯಿ ಮಕ್ಕಳ ಆರೈಕೆ (ಎಂ.ಸಿ.ಹೆಚ್) ಆಸ್ಪತ್ರೆಯಲ್ಲಿ 400 ಬೆಡ್ ಕೋವಿಡ್ ಆಸ್ಪತ್ರೆಯನ್ನು ಮಕ್ಕಳಿಗಾಗಿ ನಿರ್ಮಿಸಲಾಗಿದೆ ಎಂದರು.
ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಮರಣ ದರ ಶೇ. 1.70 ಇದೆ. ಇದು ರಾಜ್ಯದ ಸರಾಸರಿಗೆ ಹೋಲಿಸಿದರೆ, ಜಿಲ್ಲೆಯ ಮರಣ ದರ ತಗ್ಗಿಸುವ ನಿಟ್ಟಿನಲ್ಲಿ ವಿಶೇಷ ಗಮನ ಹರಿಸುವಂತೆ ನಿರ್ದೇಶನ ನೀಡಿದರು.
ಸೋಂಕು ಪತ್ತೆ ಆದ ತಕ್ಷಣ ಸೋಂಕಿತರನ್ನು ನಿಗಾ ವಹಿಸಿ ಚಿಕಿತ್ಸೆ ನೀಡಬೇಕು. ಹಳ್ಳಿಗಳಲ್ಲಿನ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಕಡ್ಡಾಯವಾಗಿ ದಾಖಲಿಸಿ. ಮನೆಯಲ್ಲಿ ಇರಲು ಬಿಡಬೇಡಿ. ಗ್ರಾಮೀಣ ಭಾಗದ ಕೋವಿಡ್ ಕೇರ್ ಕೇಂದ್ರಗಳಲ್ಲಿ ಉತ್ತಮ ಆಹಾರ, ವೈದ್ಯಕೀಯ ಚಿಕಿತ್ಸೆ, ಔಷಧೋಪಚಾರ ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಲಸಿಕೆ ನೀಡುವುದನ್ನು ತೀವ್ರಗೊಳಿಸಬೇಕು. ಧಾರವಾಡ ಜಿಲ್ಲೆಯಲ್ಲಿ ಸದ್ಯ ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಶೇ.11.9 ಇದೆ. ಇದನ್ನು ಶೇ.5 ಕ್ಕೆ ಇಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಕೋವಿಡ್ ಸೋಂಕಿನ ಖಚಿತತೆ ಪ್ರಮಾಣ ಶೇ.5ಕ್ಕೆ ಇಳಿದರೆ ಕೋವಿಡ್ ಲಾಕ್‍ಡೌನ್ ನಲ್ಲಿ ವಿನಾಯಿತಿ ನೀಡಲಾಗುವುದು. ಕೋವಿಡ್ ಸೋಂಕು ಹರಡದಂತೆ ತಡೆಯುವುದು ಜನರ ಕೈಯಲ್ಲೇ ಇದೆ. ರಾಜ್ಯಕ್ಕೆ ಎರೆಡು ದಿನದಲ್ಲಿ ಅಗತ್ಯ ಕೋವಿಡ್ ವ್ಯಾಕ್ಸಿನ್‍ಗಳು ಬರಲಿವೆ. ವ್ಯಾಕ್ಸಿನ್ ಕೊರತೆ ನೀಗಲಿದೆ. ಸರ್ಕಾರದಿಂದಲೇ ಎಲ್ಲರಿಗೂ ಉಚಿತ ವ್ಯಾಕ್ಸಿನ್ ನೀಡಲಾಗುವುದು ಎಂದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಅಕ್ಕಪಕ್ಕದ 13 ಜಿಲ್ಲೆಗಳಿಂದ ಕೋವಿಡ್ ಗಂಭೀರ ಸ್ಥಿತಿ ತಲುಪಿದ ರೋಗಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ ಇತರೆ ಆಸ್ಪತ್ರೆ ದಾಖಲಿಸುತ್ತಾರೆ. ಹಾಗಾಗಿ ಜಿಲ್ಲೆಯಲ್ಲಿ ಮರಣದ ಪ್ರಮಾಣ ರಾಜ್ಯದ ಸರಾಸರಿಗಿಂತ ಸ್ವಲ್ಪ ಅಧಿಕವಾಗಿದೆ. ಬ್ಲಾಕ್ ಫಂಗಸ್ ಚಿಕಿತ್ಸೆಯನ್ನು ಎ.ಬಿ.ಎ.ಆರ್.ಕೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಕೋವಿಡ್ ನಿರ್ವಹಣೆಗೆ ಪ್ರತಿ ಗ್ರಾಮಪಂಚಾಯತಿಗೆ 50 ಸಾವಿರ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಕಿಮ್ಸ್ ಗೆ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ಅನುಮೋದನೆ ನೀಡಬೇಕು ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳಲ್ಲಿ ಕೋರಿದರು.
ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಸಭೆಯಲ್ಲಿ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಕಳೆದ ಮೇ ಮೊದಲ ವಾರದಲ್ಲಿ ಕೋವಿಡ್ ಪಾಸಿಟಿವ್ ದರ ಶೇ.39.2 ಕ್ಕೆ ಏರಿತ್ತು.ವ್ಯಾಪಕ ನಿಯಂತ್ರಣ ಕ್ರಮಗಳಿಂದ ಇದೀಗ ಅದು 11.9 ಕ್ಕೆ ಇಳಿದಿದೆ.ಜಿಲ್ಲೆಯಲ್ಲಿ ಇದೀಗ 4385 ಸಕ್ರಿಯ ಪ್ರಕರಣಗಳಿವೆ 600 ಜನ ಕೋವಿಡ್ ಕೇರ್ ಕೇಂದ್ರಗಳಲ್ಲಿ,1500 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಲಕ್ಷಣರಹಿತ ಸೋಂಕಿತರು ಮನೆಗಳಲ್ಲಿ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.ಜಿಲ್ಲೆಯ 20 ಲಕ್ಷ ಜನಸಂಖ್ಯೆಯಲ್ಲಿ ಸುಮಾರು 9 ಲಕ್ಷ ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 10 ದಿನಗಳಲ್ಲಿ ನಗರ ಪ್ರದೇಶದ ಶೇ.41 ಹಾಗೂ ಗ್ರಾಮೀಣ ಪ್ರದೇಶದ ಶೇ.58 ರಷ್ಟು ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ.ಜಿಲ್ಲೆಯ ಆಸ್ಪತ್ರೆಗಳಿಗೆ ರೆಮಿಡಿಸಿವರ್ ಹಾಗೂ ಆ?ಯಂಪೆÇಟೋರಿಸಿನ್-ಬಿ ಔಷಧಿಗಳನ್ನು ಸಮಪರ್ಕವಾಗಿ ಪೂರೈಸಲಾಗುತ್ತಿದೆ.ಇದುವರೆಗೆ 3,31,717 ಜನರಿಗೆ ಲಸಿಕೆ ಹಾಕಿಸಲಾಗಿದೆ.ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ 1215 ಜನರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಅಡಿ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದಕಾ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಎಬಿಆರ್‍ಕೆ ಅಡಿ ಬ್ಲಾಕ್ ಫಂಗಸ್ ಚಿಕಿತ್ಸೆ :
ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಗೆ ರಾಜ್ಯ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕದಡಿ ಬ್ಲಾಕ್ ಫಂಗಸ್ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ಕಿಮ್ಸ್‍ನಲ್ಲಿ ಬ್ಲಾಕ್ ಫಂಗಸ್ ಸರ್ಜರಿಗೆ ಬೇಕಾದ ವೈದ್ಯಕೀಯ ಪರಿಕರಗಳನ್ನು ತಕ್ಷಣವೇ ಖರೀದಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಸಾರಿ( Sಂಖಇಇ) ಲಕ್ಷಣದಿಂದ ಆಸ್ಪತ್ರೆಗೆ ದಾಖಲಾಗಿ ಮರಣ ಹೊಂದಿದರೆ ಕೋವಿಡ್ ಮರಣ ಎಂದೇ ಪರಿಗಣಿಸಲಾಗುವುದು. ಸಾರಿ ಲಕ್ಷಣಗಳಿಂದ ತಂದೆ ತಾಯಿ ಮೃತಪಟ್ಟರೆ, ಮಕ್ಕಳಿಗೆ ಸರ್ಕಾರದಿಂದ ಎಲ್ಲಾ ಸವಲತ್ತುಗಳನ್ನು ನೀಡಲಾಗುವುದು. ಅಂಪೆÇೀಟೆರಿಸನ್ ಬಿ ಲಸಿಕೆಯನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಎಫ್.ಐ.ಆರ್.ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಉಪಮುಖ್ಯಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮೋಹನ ಲಿಂಬಿಕಾಯಿ, ಅಧಿಕಾರಿಗಳು ಮತ್ತಿತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.