ಕೇಂದ್ರದ ಓಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾತರ ಸೇರ್ಪಡೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

ಚಾಮರಾಜನಗರ, ಆ.1:- ವೀರಶೈವ ಲಿಂಗಾಯಿತ ಸೇರಿದಂತೆ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ನೇತೃತ್ವದಲ್ಲಿ ಸಮಾಜದ ನಾನಾ ಸಂಘಟನೆಗಳ ವತಿಯಿಂದ ನಗರದಲ್ಲಿಂದು ಐದು ಸಾವಿರಕ್ಕು ಹೆಚ್ಚು ಸಂಖ್ಯೆಯಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೆ ಗೀತಾ ಮಹದೇವಪ್ರಸಾದ್ ಹಾಗೂ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಯ ಮಾರ್ಗ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಮುಖಾಂತರ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೆ ಗೀತಾ ಮಹದೇವಪ್ರಸಾದ್ ಮಾತನಾಡಿ, ರಾಜ್ಯದಲ್ಲಿ ಕಳೆದ 60 ವರ್ಷಗಳಿಂದ ವೀರಶೈವ – ಲಿಂಗಾಯಿತ ಸಮುದಾಯವನ್ನು ಇತರೇ ಹಿಂದುಳಿದ ವರ್ಗ ಎಂದು ಪರಿಗಣಿಸಲಾಗಿದ್ದರೂ, ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವುದರಿಂದ ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಸೌಕರ್ಯಗಳಿಂದ ಸಮಾಜವು ವಂಚಿತವಾಗುತ್ತಿದೆ. ಎಲ್ಲ ರಾಜ್ಯಗಳಲ್ಲಿಯೂ ವೀರಶೈವ- ಲಿಂಗಾಯಿತರು ರಾಜ್ಯ ಸರ್ಕಾರಗಳ ಇತರೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆಯಾಗದಿರುವುದು ದುರದೃಷ್ಟಕರ ಸಂಗತಿ ಎಂದು ವಿμÁಧಿಸಿದರು.
ವೀರಶೈವ- ಲಿಂಗಾಯಿತ ಸಮುದಾಯವು ಬಹುತೇಕ ಕೃಷಿ ಮತ್ತು ಕೃಷಿ ಆಧಾರಿತ ಕಸುಬುಗಳನ್ನು ಅವಲಂಬಿಸಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿರುತ್ತದೆ. ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರದೆ ಇರುವ ಕಾರಣ ನಮ್ಮ ಸಮುದಾಯ ಜನರು ದಶಕಗಳಿಂದ ಕೇಂದ್ರ ಸರ್ಕಾರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ಕೇಂದ್ರದ ನೇಮಕಾತಿ ಅವಕಾಶಗಳಿಂದ ವಂಚಿತರಾಗಿರುತ್ತಾರೆ. ಅದರಲ್ಲಿ 34 ಉಪಪಂಗಡಗಳು ಸೇರಿದ್ದು ಇನ್ನೂ 64 ಉಪಪಂಗಡಗಳು ಸೇರಬೇಕಿದೆ. ಇದು ಅನ್ಯಾಯವಾಗಿದ್ದು, ಇದು ನಮಗಾಗದಿದ್ದರು ಮುಂದಿನ ಪೀಳಿಗೆಯವರಿಗೆ ಒಳ್ಳೆಯದಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವೀರಶೈವ ಸಮಾಜದ ಜಿಲ್ಲೆಯ ವಿವಿಧ ಮಠಾಧೀಶರಾದ ಹರವೆ ಮಠದ ಶ್ರಿ ಸರ್ಪಭೂಷಣಸ್ವಾಮೀಜಿ, ಮೂಡುಗೂರುಶ್ರೀಗಳು, ಚಿಲಕವಾಡಿ ಶ್ರೀಗಳು, ಕುಂತೂರು ಶ್ರೀಗಳು, ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೆ ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಮಹಾಸಭಾದ ಮಾಜಿ ಅಧ್ಯಕ್ಷ ಕೋಡಸೋಗೆ ಶಿವಬಸಪ್ಪ, ಬಸವ ಕೇಂದ್ರದ ಅಧ್ಯಕ್ಷ ಎನ್‍ರಿಎಚ್ ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಡಿ. ನಾಗೇಂದ್ರ, ಉಪಾಧ್ಯಕ್ಷರಾದ ಗಂಗಪ್ಪ, ಪುಟ್ಟಣ್ಣ, ರತ್ನಮ್ಮ, ಪ್ರಭುಸ್ವಾಮಿ, ವಿಶ್ವನಾಥ್, ಸುಜೇಂದ್ರ, ಇಂದ್ರ, ಉಮೇಶ್ ಕುಮಾರ್, ಲೋಕೇಶ್, ಮಲ್ಲೇಶಪ್ಪ, ವೀರಭದ್ರಸ್ವಾಮಿ, ಬಸವಣ್ಣ, ಮುರುಡೇಶ್ವರಸ್ವಾಮಿ, ಜಿ.ವೀರಭದ್ರಸ್ವಾಮಿ, ಪುರುμÉೂೀತ್ತಮ, ಮಹೇಶ್, ಲೋಕೇಶ್, ನಿರಂಜನ್ ಮೂರ್ತಿ, ಮಧು, ಬಸವರಾಜು, ಪ್ರಮೋದ್, ಗಾಯಿತ್ರಿ, ನಾಗರತ್ನ, ರತ್ನಮ್ಮ, ಉಮಾ, ಸುನಂದ, ಗಾಯಿತ್ರಿ, ರೇಣುಕ, ರೇಖಾ, ಜ್ಯೋತಿ,ಮಾಜಿ ಶಾಸಕ ಪೆÇ್ರೀ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕಾಡಾ ಅಧ್ಯಕ್ಷ ನಿಜಗುಣರಾಜು, ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ, ತಾಲೂಕು ಅಧ್ಯಕ್ಷರಾದ ಹೊಸೂರು ನಟೇಶ್, ಹಂಗಳ ನಂಜಪ್ಪ, ಯಳಂದೂರು ಪುಟ್ಟುಸುಬ್ಬಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿ.ಪಂ.ಮಾಜಿ ಅಧ್ಯಕ್ಷ ಎ.ಎಸ್.ನಟರಾಜು, ಬಿ.ಕೆ.ರವಿಕುಮಾರ್, ಕೆರೆಹಳ್ಳಿ ನವೀನ್, ತಾಲೂಕು ಮಹಾಸಭಾದ ಪದಾಧಿಕಾರಿಗಳು ಸೇರಿದಂತೆ ಐದು ತಾಲೂಕುಗಳಿಂದ ಸಮಾಜದ ಬಂಧುಗಳು ಭಾಗವಹಿಸಿದ್ದರು.