ಕೇಂದ್ರದ ವಿರುದ್ಧ ಪರಂ ವಾಗ್ದಾಳಿ..

ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವರ ಪುತ್ರನ ಕಾರು ಹರಿದು ಮೃತಪಟ್ಟ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದರು.