ಕೇಂದ್ರದ ಹದಗೆಟ್ಟ ಆಡಳಿತ ಕಾಂಗ್ರೆಸ್ ಟೀಕೆ

ಕೆ.ಆರ್.ಪುರ,ಜು.೧೩- ಪ್ರಧಾನಿ ನರೇಂದ್ರ ಮೋದಿ ಅವರ ಹದಗೆಟ್ಟ ಆಡಳಿತದಿಂದ ಗ್ಯಾಸ್, ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆರಿದ್ದು ಬಡವರ ಜೀವನ ಕಷ್ಟಕರವಾಗಿದೆ ಎಂದು ನಿಕಟಪೂರ್ವ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ದೂರಿದರು.
ಕೆ.ಆರ್.ಪುರ ಕ್ಷೇತ್ರದ ಬಾಬುಸಾಪಾಳ್ಯದಲ್ಲಿ ಮುಖಂಡ ವೆಂಕಟೇಶ್ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಹೆಚ್ಚು ತೊಂದರೆ ಉಂಟುಮಾಡಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ವಿರೋಧಿ ಧೋರಣೆ ತೋರುತ್ತಿದೆ ಎಂದು ದೂರಿದರು.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಯುವಕರಿಗೆ ಯಾವುದೇ ಉದ್ಯೋಗ ನೀಡದೆ ಪಕೋಡ ಮಾರುವಂತೆ ಪುಕ್ಕಟೆ ಸಲಹೆ ನೀಡುತ್ತಾರೆಂದು ದೂರಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ೧೦ ಕೆ.ಜಿ.ಅಕ್ಕಿ ನೀಡುವುದಾಗಿ ಭರವಸೆ ನೀಡಿದರು.
ಬಡವರ ಹಾಗೂ ಮಧ್ಯಮ ವರ್ಗದ ಜನರ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಗೌಡ, ಹೊರಮಾವು ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಜಯಂತಿನಗರ ಮುನಿರಾಜು, ಮುಖಂಡರಾದ ಸುಧಾಕರ್ ರೆಡ್ಡಿ, ಬಾಬುಸಾಪಾಳ್ಯ ವೆಂಕಟೇಶ್, ಹರೀಶ್, ಜಯಂತಿನಗರ ಮುನಿರಾಜು, ಮಂಜುನಾಥ್ ಅಂಜಿನಪ್ಪ ಮತ್ತಿತರರು ಇದ್ದರು.