
ಕಲಬುರಗಿ,ನ 19: ನಗರದ ಕೇಂದ್ರ ಗ್ರಂಥಾಲಯದಲ್ಲಿರಾಷ್ಟ್ರೀಯ ಗ್ರಂಥಾಲಯ ಸಪ್ತಾಹ
ಹಮ್ಮಿಕೊಳ್ಳಲಾಗಿತ್ತು. ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ಅಜಯಕುಮಾರ
ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಲಿಕೆ ಆಯುಕ್ತ ಪಾಟೀಲಭುವನೇಶ ದೇವಿದಾಸ ವಹಿಸಿದರು.ಮುಖ್ಯ ಅತಿಥಿಗಳಾಗಿ ಡಾ.ಕೆ.ಎಸ್.ಬಂಧು, ಜೇವರಗಿ ಸರಕಾರಿಪ್ರಥಮ ದರ್ಜೆ ಕಾಲೇಜು ಗ್ರಂಥಪಾಲಕ ಡಾ ವಿನೋದಕುಮಾರ,ಕಲಬುರಗಿ
ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಡಾ ಪ್ರಭಾವತಿ,
ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕ (ಪ್ರ),ಶರಣಬಸಪ್ಪ ಆಗಮಿಸಿದರು.
ಡಾ.ಎಸ್.ಆರ್.ರಂಗನಾಥನ್ ಹಾಗೂ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜ್ಯೋತಿಬೆಳಗಿಸುವುದರೊಂದಿಗೆ ಪುಸ್ತಕ ಪ್ರದರ್ಶನ ಹಾಗೂಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು.ಅಧ್ಯಕ್ಷತೆ ವಹಿಸಿದ ಪಾಟೀಲ ಭುವನೇಶ ದೇವಿದಾಸ ಅವರು ಮಾತನಾಡಿ,ನಗರದಲ್ಲಿರುವ ಕೇಂದ್ರ ಗ್ರಂಥಾಲಯಹಾಗೂ 20 ಶಾಖಾ ಗ್ರಂಥಾಲಯಗಳ ಸದುಪಯೋಗವನ್ನುಸಾರ್ವಜನಿಕರು ಪಡೆದುಕೊಳ್ಳುವಂತೆ ಸೂಚಿಸಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಕ್ಕಳಿಗೆ ಹಾಗೂಗ್ರಂಥಾಲಯದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಐ.ಎ.ಎಸ್‍ಹಾಗೂ ಕೆ.ಎ.ಎಸ್ ಪರೀಕ್ಷೆಗಳ ತಯಾರಿಯ ಕುರಿತು ತಮ್ಮಅನುಭವಗಳನ್ನು ಹಂಚಿಕೊಂಡರು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ¸ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನುಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪುಸ್ತಕ, ಪೆನ್ನು, ಪ್ರಮಾಣ ಪತ್ರ ಹಾಗೂ ಭಾರತದ ಸಂವಿಧಾನ ಪೀಠಿಕೆಯನ್ನು ನೀಡಲಾಯಿತು.