ಕೇಂದ್ರ ಬಿಜೆಪಿ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕಲಬುರಗಿ,ಡಿ.21-ಉಭಯ ಸದನಗಳ 142 ಸಂಸದರ ಅಮಾನತು ಮತ್ತು ಪ್ರಜಾಪ್ರಭುತ್ವದ ಮೇಲೆ ನಡೆದ ಭೀಕರ ದಾಳಿ ಹಾಗೂ ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರಕಾರದ ನಡೆಯನ್ನು ತೀವ್ರವಾಗಿ ಖಂಡಿಸಿ ಡಿ.22 ರಂದು ಬೆಳಿಗ್ಗೆ 11-00 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯು ಬೆಳಿಗ್ಗೆ 11-00 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಿಂದ ಹೊರಡುವದು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಾಂಗ್ರೆಸ್ ಹಿರಿಯ ಮುಖಂಡರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಡಿಸಿಸಿ ಡೇಲಿಗೇಟ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ
ಪಂಚಾಂiÀiತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಮಾಜಿಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಹಾಲಿ ಮತ್ತು ಮಾಜಿಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.