ಕೇಂದ್ರ ಬೇಡಿಕೆ ಒಪ್ಪಿಕೊಳ್ಳಲಿದೆ: ಟಿಕಾಯತ್ ವಿಶ್ವಾಸ

ಜೈಪುರ, ಏ 4- ಮುಂದಿನ ಐದಾರು ತಿಂಗಳುಗಳಲ್ಲಿ ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ವಿವಿಧ ರಾಜ್ಯಗಳಲ್ಲಿ ಸಮಾವೇಶಗಳನ್ನು ನಡೆಸುತ್ತಿರುವ ರಾಕೇಶ್ ಟಿಕಾಯತ್ ಇಂದು ರಾಜಸ್ಥಾನದ ಅಬು ರೋಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು.

ಗುಜರಾತ್ ಗೂ ಭೇಟಿ ನೀಡಿ, ಕೃಷಿ ಕಾನೂನುಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಬಗ್ಗೆ ಅಲ್ಲಿನ ರೈತರೊಂದಿಗೆ ಮಾತನಾಡುವುದಾಗಿ ಹೇಳಿದ ಟಿಕಾಯತ್, ಬರ್ಡೋಲಿ ಮತ್ತು ಸಬರಮತಿಗೂ ತೆರಳಿ, ರೈತರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.