ಕೇಂದ್ರ ಸಚಿವ ಡಿವಿಎಸ್ ಡಿಸ್ಚಾರ್ಜ್

ಬೆಂಗಳೂರು,ಜ.5- ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಆಸ್ಟರ್ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಇಂದು ಮಧ್ಯಾಹ್ನ ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರು ಶಿವಮೊಗ್ಗದಲ್ಲಿ ನಡೆದ ಕಾರ್ಯಕರಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಬರುತ್ತಿದ್ದಾಗ, ಮಾರ್ಗ ಮಧ್ಯ ಆರೋಗ್ಯದಲ್ಲಿ ಏರುಪೇರಾಗಿತ್ತು.
ತಕ್ಷಣವೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ನಗರದ ಆಸ್ಟರ್ ಆಸ್ಪತ್ರೆಗೆ ಕರೆ ತರಲಾಗಿತ್ತು.
ಸಕ್ಕರೆ ಅಂಶ ಕಡಿಮೆಯಾಗಿರುವ ಕಾರಣದಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಎರಡು ದಿನದ ಚಿಕಿತ್ಸೆಯ ಬಳಿಕ ಗುಣಮುಖರಾಗಿ ಆಸ್ಟರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.