
ಕಲಬುರಗಿ:ಮಾ.08:ಕೇಂದ್ರ ಆರೋಗ್ಯ ಸಚಿವರು, ಪಕ್ಷದ ಚುನಾವಣಾ ಸಹ ಉಸ್ತುವಾರಿಗಳಾದ ಡಾ. ಮನ್ಸುಖ್ ಮಾಂಡವೀಯ ಅವರು ಒಂದು ದಿನದ ಭೇಟಿಗಾಗಿ ಇಂದು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಬಿಜೆಪಿ (ಗ್ರಾಮಾಂತರ) ಅಧ್ಯಕ್ಷರಾದ ಶಿವರಾಜ ಪಾಟೀಲ್ ರದ್ದೇವಾಡಗಿ ಹಾಗೂ ಮಹಾನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ ಸ್ವಾಗತಿಸಿದರು.
ಪಕ್ಷದ ಸಂಘಟನೆ ಮತ್ತು ಕಲಬುರಗಿ ಜಿಲ್ಲೆಯ ಕುರಿತು ವಿವರವಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಚವಾಣ್ ಇದ್ದರು.