ಕೇಂದ್ರ ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ಸದುಪಯೋಗವಾಗಬೇಕು; ಸಂಸದ ಡಾ.ಉಮೇಶ್ ಜಾಧವ

ಯಾದಗಿರಿ : ಜು : 15 : ಅಭಿವೃದ್ಧಿ ಮಾಡುವುದೇ ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು ಗ್ರಾಮದ ಕಟ್ಟಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆಯ ಮಾಹಿತಿ ತಲುಪಿಸಿ ಎಲ್ಲರೂ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು ಸಂಸದ ಡಾ.ಉಮೇಶ ಜಾಧವ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಸಾಯಂಕಾಲ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಕ್ಷೇತ್ರದ ಅಭಿವೃದ್ದಿಯಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಅಧಿಕಾರಿಗಳು ಸರಕಾರ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿಭಾಯಿಸಬೇಕು,ಅಧಿಕಾರಿಗಳು ಕಚೇರಿಗೆ ನಿಗದಿಪಡಿಸಿದ ಸಮಯಕ್ಕೆ ಬರಬೇಕು. ಜವಾಬ್ದಾರಿಯನ್ನು ಅರಿತುಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು

ಜನರು ಕೂಲಿ ಕೆಲಸಕ್ಕಾಗಿ ದೂರದ ಪಟ್ಟಣಗಳಿಗೆ ವಲಸೆ ಹೋಗಬಾರದೆಂದು ಕೇಂದ್ರ ಸರ್ಕಾರ ನರೇಗಾ ಕೂಲಿ ಮೊತ್ತ ಹೆಚ್ಚಳ ಮಾಡಿ ಕೂಲಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸಿದೆ.ಗ್ರಾಮೀಣ ಭಾಗದಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣೆ, ಗ್ರಾಮೀಣ ಮೂಲ ಸೌಕರ್ಯ ಕಾಮಗಾರಿಗಳು, ಕೃಷಿ ಹೊಂಡ ನಿರ್ಮಾಣ, ಕೃಷಿ ಬಾವಿ ತೆಗೆಯುವುದು. ರೈತರ ಹೊಲಗದ್ದೆಯಲ್ಲಿ ಬದು ನಿರ್ಮಾಣ, ರೈತರ ಜಮೀನುಗಳಲ್ಲಿ ವೈಯಕ್ತಿಕ ಕಾಮಗಾರಿಗಳು, ವಸತಿ ಯೋಜನೆಯಡಿ ಮನೆ ನಿರ್ಮಾಣ ಸೇರಿದಂತೆ ಕೆಲ ಕಾಮಗಾರಿಗಳಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡಲು ಅಧಿಕಾರಿಗಳು ಅವಕಾಶ ಕಲ್ಪಿಸಬೇಕು ಎಂದು ಸಂಸದರು ಸೂಚಿಸಿದರು.

ಪ್ರತಿ ಗ್ರಾಪಂಗಳು ಪ್ರಧಾನ ಮಂತ್ರಿಗಳ ಆಶಯದಂತೆ ಗ್ರಾಮಗಳ ನೈರ್ಮಲ್ಯ ಸ್ವಚ್ಛತೆ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಪ್ರಧಾನ ಮಂತ್ರಿ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮ ಪ್ರತಿಯೊಂದು ಗ್ರಾಪಂಗಳಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಂತೆ ಪಂಚಾಯ್ತಿ ಅಧಿಕಾರಿಗಳಿಗೆ ಸೂಚಿಸಿದರು. ರೈತರ ಆದಾಯ ದ್ವಿಗುಣಗೆuಟಿಜeಜಿiಟಿeಜಳಿಸುವಲ್ಲಿ ಪ್ರಧಾನ ಮಂತ್ರಿಗಳ ಅಭಿವೃದ್ಧಿ ಕಾರ್ಯಕ್ರಮಗಳು ಪ್ರತಿಯೊಬ್ಬ ರೈತರಿಗೂ ತಲುಪಿಸಬೇಕಾಗಿದೆ ಎಂದು ಸಂಸದರು ಸೂಚಿಸಿದರು.

ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಯ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಮಾಡಬೇಕು ಎಂದರು.

ಅಧಿಕೃತ ಮಾರಾಟಗಾರರಿಂದ ಮಾತ್ರ ಬೀಜ ರಸಗೊಬ್ಬರ ಖರೀದಿಸುವಂತೆ ರೈತರಲ್ಲಿ ಜಾಗೃತಿ ಮೂಡಿಸಿ, ಸೂಕ್ತ ಸಮಯದಲ್ಲಿ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಒದಗಿಸಿ ಕೊರತೆಯಾಗದಂತೆ ನೋಡಿಕೊಳ್ಳಬೇಕು.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಕುರಿತು ಅರಿವು ಮೂಡಿಸಿ, ಬೆಳೆ ವಿಮೆ, ಪಿಎಂ ಕಿಸಾನ್ ಮತ್ತು ಬೆಳೆ ಹಾನಿ ಸೇರಿ ಎಲ್ಲಾ ಯೋಜನೆ ಪರಿಹಾರಧನ ಸಮಯಕ್ಕೆ ಸರಿಯಾಗಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಗತ್ತಿನಲ್ಲೇ ಭಾರತ ದೇಶ ಹೆಚ್ಚು ಯುವ ಸಮೂಹ ಹೊಂದಿದೆ. ದೇಶದ ಯುವ ಸಮೂಹದ ಸ್ವಾವಲಂಬಿ ಬದುಕಿಗೆ ಆತ್ಮನಿರ್ಭರ ಯೋಜನೆ ಸಹಕಾರಿಯಾಗಿದ್ದು ಈ ಯೋಜನೆ ಕುರಿತು ಅರಿವು ಮೂಡಿಸಲು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

ಆಯುಷ್ಮಾನ್ ಭಾರತ್ ಅಥವಾ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಆರೋಗ್ಯ ಯೋಜನೆಯಾಗಿದೆ. ಸಾಮಾನ್ಯ ಕಾಯಿಲೆಗಳಿಂದ ಹೃದಯಾಘಾತ, ಕ್ಯಾನ್ಸರ್ ಸೇರಿದಂತೆ ಸಾವಿರಾರು ಆರೋಗ್ಯ ಸಮಸ್ಯೆಗೆ ಯೋಜನೆಯಡಿ ಚಿಕಿತ್ಸೆ ಪಡೆಯಬಹುದು. ವಿಶ್ವದಲ್ಲೇ ಅತಿ ದೊಡ್ಡ ಸರಕಾರಿ ಪ್ರಾಯೋಜಿತ ಆರೋಗ್ಯ ಯೋಜನೆ ಎಂಬ ಕೀರ್ತಿಗೆ ಆಯುಷ್ಮಾನ್ ಭಾರತ್ ಪಾತ್ರವಾಗಿದ್ದು ಇದರ ಸದುಪಯೋಗವಾಗಲು ಶ್ರಮಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ತಾಂಡ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನುಕೂಲವಾಗಲು ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಸಂಸದರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಜಿಲ್ಲೆಯಲ್ಲಿ 27 ಅಂಗಡಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯ ಪ್ರತಿಯೊಬ್ಬ ಅರ್ಹ ಅಸಂಘಟಿತ ಕಾರ್ಮಿಕರು ಸಮಗ್ರ ರಾಷ್ಟ್ರೀಯ ದತ್ತಾಂಶ (ಇ-ಶ್ರಮ್) ಯೋಜನೆಯಡಿ ಹೆಸರು ನೋಂದಾಯಿಸಿ ಸೌಲಭ್ಯ ಪಡೆದುಕೊಳ್ಳಬೇಕು ಎಂದರು. ಕೋವಿಡ್ ಲಾಕ್‍ಡೌನ್ ಸಂದರ್ಭ ಅನೇಕ ಶ್ರಮ ಜೀವಿಗಳು ಉದ್ಯೊ?ಗ ಕಳೆದುಕೊಂಡು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಇ-ಶ್ರಮ್ ಪೆÇೀರ್ಟಲ್ ಮೂಲಕ ಲಭ್ಯವಾಗುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಅಧಿಕಾರಿಗಳು ಶ್ರಮಿಸಬೇಕು. ಪ್ರಸ್ತುತ ಇ-ಶ್ರಮ್ ಪೆÇೀರ್ಟಲ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದಲ್ಲಿ ಅವರಿಗೆ ಸರಕಾರದಿಂದ ಈ ಯೋಜನೆಯ ಲಾಭ ನೇರವಾಗಿ ದೊರೆಯಲಿದೆ ಎಂದು ಸಂಸದರು ತಿಳಿಸಿದರು.

ನೋಂದಣಿಯಿಂದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆ ಪಡೆಯಬಹುದಾಗಿದೆ.1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾಬಿಮಾ ಯೋಜನೆ ಪ್ರಯೋಜನ (ಅಪಘಾತದಿಂದ ಮರಣ ಹೊಂದಿದ್ದಲ್ಲಿಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ರೂ. 2 ಲಕ್ಷ ಹಾಗೂ ಭಾಗಶ: ಅಂಗವಿಕಲತೆ ಹೊಂದಿದ್ದಲ್ಲಿ 1 ಲಕ್ಷ ಪಡೆಯಬಹುದಾಗಿದೆ)

ಇ-ಶ್ರಮ್ ಪೆÇೀರ್ಟಲ್‍ನಲ್ಲಿ ನೋಂದಣಿ ಉಚಿತವಾಗಿದ್ದು, ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿ ಪಡೆಯಬಹುದಾಗಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಇ-ಶ್ರಮ್ ಯೋಜನೆಯಡಿ ನೋಂದಣಿಗೆ ಕಟ್ಟಡ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೆ?ತರು, ಮೀನುಗಾರರು, ಕೃಷಿ ಸಂಗೋಪನಾಕಾರರು, ನೇಕಾರರು, ಬಡಗಿಗಳು, ಆಶಾ ಕಾರ್ಯಕರ್ತೆಯರು, ಛಾಯಾಚಿತ್ರಗ್ರಾಹಕರು, ಕ್ಷೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆಕೆಲಸದವರು, ಪತ್ರಿಕೆ ಮಾರಾಟಗಾರರು, ನರೇಗಾ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ತರು, ಚರ್ಮ ಅಣ್ಣನ ಕಾರ್ಮಿಕರು, ಆನ್‍ಲೆ?ನ್ ಸೇವಾ ಕಾರ್ಮಿಕರು, ಟೆ?ಲರ್‍ಗಳು, ಹೋಟೆಲ್, ಬೇಕರಿ ಕಾರ್ಮಿಕರು, ವಲಸೆ ಕಾರ್ಮಿಕರು ಸೇರಿದಂತೆ ಒಟ್ಟಾರೆ 16-59 ವರ್ಷದೊಳಗಿನವರು ನೋಂದಾಯಿಸಿಕೊಳ್ಳಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸ್ವಾಮಿತ್ವ ಯೋಜನೆ ಕುರಿತು ತಿಳಿಸಿ :

ಸ್ವಾಮಿತ್ವ ಯೋಜನೆಯು ಗ್ರಾಮೀಣ ಜನರಿಗೆ ತಮ್ಮ ಮನೆಗಳಿಗೆ ಸಾಲ ನೀಡುವ ಮೂಲಕ ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಸರ್ಕಾರವು ಹಳ್ಳಿಗಳಲ್ಲಿ ಡ್ರೋನ್‍ಗಳನ್ನು ಬಳಸಿ ಡಿಜಿಟಲ್ ಸಮೀಕ್ಷೆಯನ್ನು ಮಾಡುತ್ತದೆ ಮತ್ತು ಅರ್ಹ ಜನರಿಗೆ ಮನೆ ಮಾಲೀಕತ್ವ ಪ್ರಮಾಣ ಪತ್ರವನ್ನು ನೀಡುತ್ತದೆ. ಇದಲ್ಲದೆ, ಅರ್ಹ ಫಲಾನುಭವಿಗಳು ಅಧಿಕೃತ ಪೆÇೀರ್ಟಲ್ ನಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮೂಲಕ, ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ವಾಮಿತ್ವ ಯೋಜನೆಯ ಪ್ರಯೋಜನಗಳನ್ನು ಪಡೆಯವುದರ ಕುರಿತು ಜನರಿಗೆ ತಿಳಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಅಮರೇಶ ನಾಯ್ಕ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.