ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೃಷಿ ಮಸೂದೆ ಸುಗ್ರಿವಾಜ್ಞೆ ತಿದ್ದುಪಡಿ ಹಿಂಪಡೆಯಬೇಕು:

ಹತ್ತಿ, ಭತ್ತ ಖರೀದಿ ಕೇಂದ್ರಗಳು ಪ್ರಾರಂಭಿಸಬೇಕು ಬಸವರಾಜ್
ಮಾನ್ವಿ ನ.06- ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ವಿರೋಧಿ ನೀತಿ ಅನುಸರಿಸಿದ್ದು ಶೀಘ್ರದಲ್ಲಿ ಕೃಷಿ ಮಸೂದೆ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು ಮತ್ತು ಹತ್ತಿ ಹಾಗೂ ಭತ್ತ ಕೇಂದ್ರಗಳು ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷರಾದ ಕೆ ವೈ ಬಸವರಾಜ್ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿತ ಕಂಡಿದೆ ಕೇಂದ್ರ ಸರ್ಕಾರ ರೈತರ ವಿರೋಧಿ ನೀತಿ ಅನುಸರಿಸಿದ್ದು ಇದು ಖಂಡಿನಿಯ,
ಈ ವಾರದಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಸಮಿತಿ ರಚಿಸಿ ಸಭೆ ಕರೆದು ಹತ್ತಿ ಹಾಗೂ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಬೇಕು.
ಈ ಭಾಗದ ರೈತರಿಗೆ ಶಾಸಕರು ರೈತಪರ ಧ್ವನಿ ಎತ್ತುವ ಮೂಲಕ ರೈತರಿಗೆ ಮೂಲಭೂತ ಸೌಲಭ್ಯಗಳು ಒದಗಿಸಿಕೊಡಬೇಕು.
ಪೋತ್ನಾಳದಿಂದ ಉದ್ಬಾಳ ಗ್ರಾಮದವರೆಗೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ವಿಪರೀತ ಹದಗೆಟ್ಟಿದ್ದರು ಮೌನ ವಹಿಸಿದ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು,
ಮಾನ್ವಿಯಿಂದ ರಾಯಚೂರಿಗೆ ತೆರಳುವ ರಾಜ್ಯ ಹೆದ್ದಾರಿ ರಸ್ತೆ ಹದಗೆಟ್ಟಿದು ದುರಸ್ತಿ ಗೊಳಿಸದೆ ಅಧಿಕಾರಿಗಳು ಹಾಗೂ ಶಾಸಕರು ಕಣ್ಣು ಮುಚ್ಚಿ ಕುಳಿತಿದ್ದಾರೆ.
ಭೂ ಸುಧಾರಣೆ ಕಾಯ್ದೆ ಅಗತ್ಯ ವಸ್ತುಗಳ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಅನೇಕ ಬಾರಿ ಹೋರಾಟ ಮಾಡಿದರು ಸರ್ಕಾರ ಮಾತ್ರ ಮೌನವಾಗಿ ಇರುವುದು ದುರಂತ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ಎಪಿಎಂಸಿ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಿಂಪಡೆಯದ್ದಿರೆ ಒಂದು ವಾರದಲ್ಲಿ ರೈತ ಸಂಘ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗವುದು ಎಂದು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಈ.ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ, ತಿಮಣ್ಣ ಭೊವಿ, ಅಚ್ಚುತ್ತರಾಯ್ ಉದ್ಬಾಳ, ಶಿವರಾಜ್, ವೀರನಗೌಡ, ವೆಂಕಟೇಶ್, ಇನ್ನಿತರ ಉಪಸ್ಧಿತಿರ ಇದ್ದರು