ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದು

ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ರಾತ್ರಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಕ್ ಕತ್ತರಿಸಿ 75ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಕೆ ಜೆ ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮತ್ತಿತರರು ಇದ್ದರು.