ಕೇಜ್ರಿವಾಲ್‌ಗೆ ಗುಜರಾತ್ ಕೋರ್ಟ್ ಸಮನ್ಸ್

ನವದೆಹಲಿ,ಮೇ.೨೩- ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಗುಜರಾತ್ ನ್ಯಾಯಾಲಯ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ ೭ಕ್ಕೆ ನಿಗದಿಪಡಿಸಲಾಗಿದೆ.

ಗುಜರಾತ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಸಲ್ಲಿಸಿದ ಕ್ರಿಮಿನಲ್ ಮಾನನಷ್ಟ ದೂರಿನಲ್ಲಿ ಮೇ ೨೩ ರಂದು ತನ್ನ ಮುಂದೆ ಹಾಜರಾಗುವಂತೆ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯ ಏಪ್ರಿಲ್ ೧೫ ರಂದು ಕೇಜ್ರಿವಾಲ್ ಮತ್ತು ಸಿಂಗ್‌ಗೆ ಸಮನ್ಸ್ ನೀಡಿತು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ
ಇಂದು ಮತ್ತೆ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಬಗ್ಗೆ ಗುಜರಾತ್ ವಿಶ್ವವಿದ್ಯಾಲಯದ ವಿರುದ್ಧ “ವ್ಯಂಗ್ಯ” ಮತ್ತು “ಅವಹೇಳನಕಾರಿ” ಹೇಳಿಕೆಗಳಿಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ ಅವರ ನ್ಯಾಯಾಲಯ ಈ ಸಮನ್ಸ್ ಜಾರಿಗೊಳಿಸಿದೆ.

ಪ್ರಧಾನಿ ಮೋದಿ ಅವರ ಪದವಿಯ ಬಗ್ಗೆ ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡುವಂತೆ ಮುಖ್ಯ ಮಾಹಿತಿ ಆಯುಕ್ತರ ಆದೇಶವನ್ನು ಗುಜರಾತ್ ಹೈಕೋರ್ಟ್ ತಳ್ಳಿಹಾಕಿದ ನಂತರ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಕೇಜ್ರಿವಾಲ್ ಮತ್ತು ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಯಾವುದೇ ಸಮಸ್ಸ್ ಸ್ವೀಕರಿಸಿಲ್ಲ:

ಪ್ರಧಾನಿ ಮೋದಿ ಪದವಿ ಪ್ರಕರಣಕ್ಕೆ ಸಂಬಂದಿಸಿದಂತೆ : ಯಾವುದೇ ಸಮನ್ಸ್ ಸ್ವೀಕರಿಸಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಹೇಳಿಕೆ ನೀಡಿದ್ದಾರೆ.
.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನ್ಯಾಯಾಲಯದ ಮುಂದೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರಿಗೆ ನ್ಯಾಯಾಲಯ ನೀಡಿರುವ ಸಮನ್ಸ್ ಇನ್ನೂ ಬಂದಿಲ್ಲ ಎಂದು ಗುಜರಾತ್ ಎಎಪಿಯ ಕಾನೂನು ಘಟಕದ ಮುಖ್ಯಸ್ಥ ಪ್ರಣವ್ ಠಕ್ಕರ್ ಹೇಳಿದ್ದಾರೆ.

ಸಮನ್ಸ್ ಸ್ವೀಕರಿಸಿದ ನಂತರವೇ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ” ಎಂದು ಹೇಳಿದರು.