ಕೇಜ್ರಿವಾಲ್‌ಗೆ ಜೂನ್ ೧ರವರೆಗೆ ಮಧ್ಯಂತರ ಜಾಮೀನು

ನವದೆಹಲಿ, ಮೇ ೧೦- ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರೀಂಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಇದರಿಂದಾಗಿ ಕಳೆದ ಕೆಲವು ದಿನಗಳಿಂದ ಜೈಲು ವಾಸ ಅನುಭವಿಸಿದ್ದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಕೇಜ್ರಿವಾಲ್ ತಾತ್ಕಾಲಿಕ ನಿರಾಳವಾಗಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು ಕೇಜ್ರಿವಾಲ್ ಅವರಿಗೆ ಜೂನ್ ೧ ರವರೆಗೆ ಸರ್ವೋಚ್ಛ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವಾದ ಪ್ರತಿವಾದ ಆಲಿಸಿದ್ದ ಸುಪ್ರೀಂಕೋರ್ಟ್ ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಜೈಲು ಪಾಲಾಗಿದ್ದರೂ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಜೈಲಿನಿಂದಲೇ ಕೆಲವೊಂದು ನಿರ್ದೇಶನ ನೀಡಿದ್ದರು. ಈಗ ಅವರಿಗೆ ಜಾಮೀನು ಲಭಿಸಿದ್ದರಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದಾರೆ.
ಆದರೆ ಜೂನ್ ನಂತರ ಕೇಜ್ರಿವಾಲ್ ಭವಿಷ್ಯ ಏನು ಆಗಲಿದೆ ಎಂಬುದು ಕುತೂಹಲಕ್ಕೇಡೆ ಮಾಡಿಕೊಟ್ಟಿದೆ. ತಮ್ಮ ಬಂಧನ ಕಾನೂನುಬಾಹಿರ ಎಂದು ಆರೋಪಿಸಿ ಕೇಜ್ರಿವಾಲ್ ಅವರು ಕೇಂದ್ರದ ವಿರುದ್ಧ ಕಾನೂನು ಸಮರ ನಡೆಸಿದ್ದರು.