ಕೇಜ್ರಿವಾಲ್ ಪದಚ್ಯುತ ಅರ್ಜಿ ವಜಾ

ನವದೆಹಲಿ,ಮಾ.೨೮- ದೆಹಲಿ ಮದ್ಯ ನೀತಿ ಅನಿಷ್ಠಾನ ಪ್ರಕರಣಕ್ಕೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಿ ಗೊಳಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾ ಮಾಡಿದೆ.
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಾರ್ಟಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಕಸ್ಟಡಿ ರಿಮಾಂಡ್ ಮುಕ್ತಾಯದ ನಂತರ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಾಯಿತುಈ ವೇಳೆ ಅರ್ಜಿವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಮೊದಲು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವ ಪಿಐಎಲ್ ಅನ್ನು ವಜಾ ಮಾಡಿತುಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಒಳಗೊಂಡ ಮದ್ಯ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಬಂಧನದಲ್ಲಿ ಮಧ್ಯಪ್ರವೇಶಿಸಲು ದೆಹಲಿ ಹೈಕೋರ್ಟ್ ಈ ಹಿಂದೆ ನಿರಾಕರಿಸಿತ್ತು ಅರವಿಂದ್ ಕೇಜ್ರಿವಾಲ್ ಅವರ ಬಂಧನದ ನಂತರ, ಎಎಪಿ ಸದಸ್ಯರು ದೆಹಲಿಯಲ್ಲಿ ಪ್ರತಿಭಟನೆಗಳನ್ನು ಪ್ರಾರಂಭಿಸಿದ್ದಾರೆ, ಇಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ. ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ನಿಧಿ ಪ್ರಶ್ನಿಸಿದ್ದಾರೆ.