ಕೇಜ್ರಿವಾಲ್ ಯಾತ್ರೆ

ಬ್ಯಾಡಗಿ, ಮಾ17 : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮದಲ್ಲಿ ಕೇಜ್ರಿವಾಲ್ ಯಾತ್ರೆ ಮತ್ತು ಮನೆಮನೆಗೂ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಎಂ.ಎನ್.ನಾಯಕ ತಿಳಿಸಿದರು.
ತಾಲೂಕಿನ ಕಾಗಿನೆಲೆ ಗ್ರಾಮದ ಪಕ್ಷದ ಕಾರ್ಯಾಲಯದಲ್ಲಿ ನಡೆದ ಬ್ಲಾಕ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಜ್ರಿವಾಲ್ ಯಾತ್ರೆ ಮತ್ತು ಡೋರ್ ಟು ಡೋರ್ ಪ್ರಚಾರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಚರ್ಚೆ ಮಾಡಿ, ಪಕ್ಷದ ಸಂಘಟನೆ ಮತ್ತು ಧ್ಯೇಯೋದ್ದೇಶಗಳ ಜನರಲ್ಲಿ ಜಾಗೃತಿ ಮೂಡಿಸುವಂತೆ ತಿಳಿಸಿದರು.