ಕೇಜ್ರಿ ಜಾಮೀನು ವಿಸ್ತರಣೆ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ,ಮೇ,೨೯- ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ತರ್ತು ಅರ್ಜಿಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ
ಇದು ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನೆಡೆಯಾಗಿದ್ದು ಈಗಾಗಲೇ ಸುಪ್ರೀಂಕೋರ್ಟ್ ನೀಡಿರುವ ಸೂಚನೆಯಂತೆ ಜೂನ್ ೨ ರಂದು ನ್ಯಾಯಾಲಯದ ಮುಂದೆ ಶರಣಾಗುವುಸು ಅನಿವಾರ್ಯವಾಗಿದೆ
ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ಕೆವಿ ವಿಶ್ವನಾಥನ್ ಅವರ ರಜಾಕಾಲದ ಪೀಠ, ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲು ನಿರಾಕರಿಸಿ, ಇದರ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ನಿರ್ಧರಿಸಿದರೆ ಸೂಕ್ತ ಎಂದು ಹೇಳಿ ತುರ್ತು ಅರ್ಜಿ ವಿಚಾರಣೆಗೆ ಪಟ್ಟಿ ಮಾಡಲು ನಿರಾಕರಿಸಿದೆ
ನ್ಯಾಯಪೀಠ,ತೀರ್ಪನ್ನು ಈಗಾಗಲೇ ಕಾಯ್ದಿರಿಸಿರುವ ಪ್ರಕರಣದಲ್ಲಿ ಸಲ್ಲಿಸಲಾಗಿರುವ ಜಾಮೀನು ವಿಸ್ತರಣೆಯ ಅರ್ಜಿಯ ಪಟ್ಟಿಯನ್ನು ಮುಖ್ಯ ನ್ಯಾಯಮೂರ್ತಿಗಳು ಕೈಗೆತ್ತಿಕೊಂಡರೆ ಸೂಕ್ತ ಎಂದು ನ್ಯಾಯಪೀಠ ಹೇಳಿದೆ
ಮೇ ೧೭ ರಂದು, ಜಾರಿ ನಿರ್ದೇಶನಾಲಯ ತನ್ನ ಬಂಧನದ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಮೇ ೧೦ ರಂದು ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ಗೆ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಜೂನ್ ೧ ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು ಮತ್ತು ಜೂನ್ ೨ ರಂದು ಶರಣಾಗುವಂತೆ ಸೂಚಿಸಿತ್ತು.
ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ತುರ್ತು ವಿಚಾರಣೆಗಾಗಿ ಅರ್ಜಿ ಪ್ರಸ್ತಾಪಿಸಿದಾಗ, ನ್ಯಾಯ ಪೀಠ, ಈ ಪ್ರಕರಣ ಕಾಯ್ದಿರಿಸಿದ ವಿಷಯವಾಗಿದೆ. ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ಸೂಕ್ತ ಆದೇಶಕ್ಕಾಗಿ ಮುಖ್ಯನ್ಯಾಯಮೂರ್ತಿ ಪೀಠದ ಮುಂದೆ ಅರ್ಜಿ ಸಲ್ಲಿಸಿ ಎಂದು ಆದೇಶಿಸಿದೆ
ಹೊಸ ಅರ್ಜಿಯನ್ನು ಸಲ್ಲಿಸಿದ ಸಿಂಘ್ವಿ, ಕೇಜ್ರಿವಾಲ್ ಅವರು “ಕೇವಲ ೭ ದಿನಗಳ ವಿಸ್ತರಣೆ ಕೋರಿದ್ದಾರೆ. ಇದು ಕೇವಲ ವೈದ್ಯಕೀಯ ವಿಸ್ತರಣೆಯಾಗಿದೆ ಮತ್ತು ಸ್ವಾತಂತ್ರ್ಯದ ದುರುಪಯೋಗವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ
ಕಳೆದ ವಾರ ರಜಾಕಾಲದ ಪೀಠದ ನೇತೃತ್ವದ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಮುಂದೆ ಅರ್ಜಿಯನ್ನು ಏಕೆ ಉಲ್ಲೇಖಿಸಲಿಲ್ಲ ಎಂದು ನ್ಯಾಯ ಪೀಠ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಸೂಚಿಸಿತ್ತು