ನವದೆಹಲಿ,ಜೂ.೧೯- ರಾಷ್ಟ್ರ ರಾಜಧಾನಿಯ ಜನರಿಗೆ ಕುಡಿಯುವ ನೀರು, ಉಚಿತ ವಿದ್ಯುತ್ ನೀಡುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ತಮ್ಮ ನಿವಾಸ “ಶೀಶ್ ಮಹಲ್’ಗಾಗಿ ೪೦ ಕೋಟಿ ಖರ್ಚು ಮಾಡಿದ್ದಾರೆ. ನಾಚಿಕೆಯಾಗಬೇಕು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇರಾನಿ ನವದೆಹಲಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನಾಗರಿಕರಿಗೆ ಸೌಲಭ್ಯ ನೀಡುವಲ್ಲಿ ವಿಫಲರಾಗಿ ತಮ್ಮ ಸೌಲಭ್ಯ ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೆಹಲಿಯ ನಾಗರಿಕರಿಗೆ ಕುಡಿಯುವ ನೀರು ಮತ್ತು ಉಚಿತ ವಿದ್ಯುತ್ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಬದಲಾಗಿ ಆ ಹಣವನ್ನು ತಮ್ಮ ಮನೆಗಾಗಿ ಖರ್ಚು ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.
ಸರಳಜೀವಿ ಎಂದು ಅಧಿಕಾರಕ್ಕೆ ಬಂದ ಅರವಿಂದ ಕೇಜ್ರಿವಾಲ್ ಅವರು ಐಶಾರಾಮಿ ಜೀವನ ನಡೆಸುತ್ತಿದ್ದಾರೆ. ದೆಹಲಿಯ ಜನರಿಗೆ ನೀಡಬೇಕಾದ ಮೂಲಸೌಲಭ್ಯ ಕಸಿದು, ತಮ್ಮ ಮೋಜು ಮಸ್ತಿಗೆ ಬಳಸಿಕೊಳ್ಳುವುದನ್ನು ದೆಹಲಿಯ ಜನರು ಎಂದಿಗೂ ಕ್ಷಮಿಸಲಾರರು ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ದೆಹಲಿಯ ಉತ್ತಮ್ ನಗರದಲ್ಲಿ ಆಯೋಜಿಸಲಾದ್ದ ಸಭೆಯಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ್, ಸಂಸದ ಪರ್ವೇಶ್ ಸಾಹಿಬ್ ಸಿಂಗ್ ಮತ್ತು ಇತರ ನಾಯಕರು ಭಾಗವಹಿಸಿದ್ದರು.