ಕೇಜ್ರಿ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ತರಾಟೆ

ನವದೆಹಲಿ, ನ. ೬- ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿರುವ ದೆಹಲಿ ಹೈಕೋರ್ಟ್, ರಾಜಧಾನಿ ನಗರವನ್ನು ದೇಶದ ಕೊರೋನಾ ರಾಜಧಾನಿ ಮಾಡಲು ಹೊರಟಿದ್ದೀರಾ ಎಂದು ಕಟುವಾಗಿ ಪ್ರಶ್ನಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಉಪಟಳ ಹೆಚ್ಚಾಗಿದೆ. ಜೊತೆಗೆ ದೆಹಲಿಯಲ್ಲಿ ಕೊರೊನಾದ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆಗಳು ಕಂಡುಬರುತ್ತಿವೆ . ಪರಿಸ್ಥಿತಿ ಹೀಗಿದ್ದರೂ ಅಧಿಕಾರಿಗಳು ಮತ್ತು ಸರ್ಕಾರ ಏನು ಮಾಡುತ್ತಿದೆ ಎಂದು ನ್ಯಾಯಾಲಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ತೆಗೆದುಕೊಂಡಿದೆ.

ದೆಹಲಿಯಲ್ಲಿ ಪ್ರತಿನಿತ್ಯ ಹೊಸ ಸೋಂಕು ಪ್ರಕರಣಗಳು ಏರುಮುಖದಲ್ಲಿ ಸಾಗುತ್ತಿವೆ ಇದು ಜನರಲ್ಲಿ ಆತಂಕವನ್ನು ಹೆಚ್ಚು ಮಾಡುತ್ತಿದೆ. ಸಾವಿನ ಪ್ರಮಾಣವು ಹೆಚ್ಚಾಗುತ್ತಿದೆ. ಆಸ್ಪತ್ರೆಗಳಿಗೆ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವುದು ಆತಂಕದ ವಿಷಯವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಗುರುವಾರ ಒಂದೇ ದಿನ ೬೬ ಸೋಂಕಿತರು ಮೃತಪಟ್ಟಿದ್ದಾರೆ ಎಂಬುದು ಆರೋಗ್ಯ ಇಲಾಖೆ ಮೂಲಗಳಿಂದ ತಿಳಿದುಬಂದಿದೆ ಇತ್ತೀಚಿನ ನಾಲ್ಕು ತಿಂಗಳ ಅವಧಿಯಲ್ಲಿ ಒಂದೇ ದಿನ ಇಷ್ಟೊಂದು ಸಂಖ್ಯೆಯಲ್ಲಿ ಜನರು ಮೃತಪಟ್ಟಿರುವುದು ಇದೇ ಮೊದಲು ಎಂದು ಅಭಿಪ್ರಾಯಪಟ್ಟಿದೆ.

ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ದೆಹಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಗರವನ್ನು ದೇಶದ ಕೊರೋನ ರಾಜಧಾನಿ ಮಾಡಲು ಸರ್ಕಾರ ಹೊರಟಿದೆಯಿ ಎಂದು ಹೈಕೋರ್ಟ್ಪ್ರ ಪ್ರಶ್ನಿಸಿದೆ.

ದೆಹಲಿಯಲ್ಲಿ ಈಗ ಸಾಂಕ್ರಾಮಿಕ ರೋಗದ ಮೂರನೇ ಮೂರನೇ ಅಲೆ ಅಪ್ಪಳಿಸಿರುವ ಸಾಧ್ಯತೆಗಳು ಹೆಚ್ಚಾಗಿವೆ. Pಪ್ರತಿನಿತ್ಯ ೫ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು ಇದುವರೆಗೂ ೪ ಲಕ್ಷದ ಹದಿನಾರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಒಂದೆಡೆಯಾದರೆ ಮತ್ತೊಂದೆಡೆ ೬೦೦೦ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ಹೇಳಲಾಗಿದೆ.

ಸರ್ಕಾರ ಜನರ ಜೀವನದ ಜೊತೆ ಚೆಲ್ಲಾಟವಾಡತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ನಗರದ ವಿವಿಧ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ನಿವೃತ್ತ ನೌಕರರಿಗೆ ಸಂಬಳ ಮತ್ತು ಪಿಂಚಣಿ ನೀಡುವಲ್ಲಿ ವಿಳಂಬವಾಗಿರುವ ವಿಚಾರ ಕುರಿತು ವಾದ-ವಿವಾದ ನಡೆಯುತ್ತಿದ್ದ ಸಂದರ್ಭದಲ್ಲಿ ಈ ವಿಚಾರವನ್ನು ನ್ಯಾಯಾಲಯ ಪ್ರಸ್ತಾಪಿಸಿದೆ.