ಕೇದಾರನಾಥಕ್ಕೆ ಕಾಯಕಲ್ಪ : ಪ್ರಧಾನಿ ಭರವಸೆ

ನವದೆಹಲಿ, ನ.೬- ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕೇದಾರನಾಥ ವನ್ನು ಪುನರುಜ್ಜೀವನ ಗೊಳಿಸಲು ಹಲವು ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಕೈಗೆತ್ತಿಕೊಂಡಿದ್ದಾರೆ.

ಕೇದಾರನಾಥದಲ್ಲಿರುವ ಆದಿ ಶಂಕರಾಚಾರ್ಯರ ಸಮಾಧಿ ಸ್ಥಳವನ್ನು ಪುನರುಜ್ಜೀವನಗೊಳಿಸುವ ಜೊತೆಗೆ ಅಲ್ಲಿ ೧೨ ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದಾರೆ.

ಈ ಪ್ರತಿಮೆಯನ್ನು ಮೈಸೂರಿನ ಶಿಲ್ಪ ಕಲಾವಿದ ಅರುಣ್ ಯೋಗಿರಾಜ ನಿರ್ಮಾಣ ಮಾಡಿದ್ದಾರೆ

ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣ ಮಾಡಿರುವುದು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೇದಾರನಾಥದಲ್ಲಿ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಅವರ ಕೆಲಸದ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ಚೌಬೆ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.

೨೦೧೩ ರಲ್ಲಿ ಪ್ರವಾಹ ಉಂಟಾಗಿ ಕೇದಾರನಾಥ ಪವಿತ್ರಕ್ಷೇತ್ರ ಸಂಪೂರ್ಣವಾಗಿ ಹಾಳಾಗಿದ್ದು ಈ ಹಿನ್ನೆಲೆಯಲ್ಲಿ ಅದರ ಮರು ನಿರ್ಮಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಇದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದ್ದಾರೆ.

ಉತ್ತರಖಂಡ ರಾಜ್ಯದ ರುದ್ರಪ್ರಯಾಗ ಜಿಲ್ಲೆಯಲ್ಲಿರುವ ಕೇದಾರನಾಥ ದೇವಾಲಯವನ್ನು ಪ್ರವಾಹ ಸೇರಿದಂತೆ ಇನ್ನಿತರ ವಿಕೋಪಗಳಿಂದ ರಕ್ಷಿಸಲು ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಕೇದಾರನಾಥದಲ್ಲಿ ಪ್ರವಾಹ ಬಂದ ಹಿನ್ನೆಲೆಯಲ್ಲಿ ೧೭ ಹೆಚ್ಚು ಕುಟುಂಬಗಳು ಅಲ್ಲಿಂದ ಸುರಕ್ಷಿತ ಸ್ಥಳಗಳಿಗೆ ತೆರಳಿದವು ಅದರಲ್ಲಿ ಅರ್ಧದಷ್ಟು ಜನರು ವಾಪಸ್ ಬಂದಿದ್ದಾರೆ.

ಆದರೆ ಇನ್ನೂ ಕೆಲವು ಕುಟುಂಬಗಳು ಬಂದಿಲ್ಲ. ಮತ್ತೆ ಮರಳಿ ಕುಟುಂಬಗಳನ್ನು ಕೇದಾರನಾಥಕ್ಕೆ ಕರೆತರುವಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ರಾಜನಾಥ್ ಸಿಂಗ್ ಅವರ ಪಾತ್ರ ಹಿರಿದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಕೇದಾರನಾಥ ದೇವಾಲಯದ ಅಭಿವೃದ್ಧಿಗೆ ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ ಬಿಜೆಪಿ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಕೇದಾರನಾಥ ಸೇರಿದಂತೆ ದೇಶದ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.