ಕೇದಾರ್ ಜಗದ್ಗುರುಗಳ ಸಾನಿಧ್ಯದಲ್ಲಿ ಇಷ್ಟಲಿಂಗ ಮಹಾಪೂಜೆ

ಕಲಬುರಗಿ,ಏ.03:ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ ಇದೇ ಏಪ್ರಿಲ್ 30ರಂದು ಬೆಳಿಗ್ಗೆ 7 ಗಂಟೆಗೆ ಕೇದಾರ್ ಜಗದ್ಗುರುಗಳ ಸಾನಿಧ್ಯದಲ್ಲಿ ಇಷ್ಟಲಿಂಗ ಮಹಾಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿಮವತ್ ಕೇದಾರ್ ಜಗದ್ಗುರುಗಳ ಪೂಜಾ ಸೇವಾ ಸಮಿತಿಯ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡೆ ಶ್ರೀಮತಿ ಮಹೇಶ್ವರಿ ವಾಲಿ ಅವರು ಇಲ್ಲಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಭೀತಿ ಸೇರಿದಂತೆ ಇನ್ನಿತರ ಕಾರಣಗಳಿಗಾಗಿ ಆತಂಕಕ್ಕೆ ಒಳಗಾಗಿರುವ ಜನರಲ್ಲಿ ಮಾನಸಿಕ ನೆಮ್ಮದಿಯನ್ನು ಮೂಡಿಸುವ ಸದುದ್ದೇಶದಿಂದ ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನೆರವೇರಲಿದೆ. ವೇದಿಕೆಯ ಮೇಲೆ ಸುಮಾರು 11 ಜನ ದಂಪತಿಗಳು ಮಹಾಪೂಜೆಯಲ್ಲಿ ತೊಡಗುವರು. ಉಳಿದಂತೆ ಸಾರ್ವಜನಿಕರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತದೆ. ಒಂದು ವೇಳೆ ಹೆಚ್ಚಿನ ಜನರಿಗೆ ಜಿಲ್ಲಾಡಳಿತವು ಅವಕಾಶ ಕೊಡದೇ ಇದ್ದರೆ ಖಾಸಗಿ ವಾಹಿನಿಗಳ ಮೂಲಕ ನೇರ ಪ್ರಸಾರ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಧರ್ಮಪ್ರಕಾಶ್ ಪಾಟೀಲ್, ಅಶೋಕಕುಮಾರ್ ಪಟ್ಟಣಶೆಟ್ಟಿ, ಮೃತ್ಯುಂಜಯ್ ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.