ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಭೀಕರ ಕೊಲೆ

ಪಾಲಕ್ಕಾಡ್, ನ15- ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನನ್ನು ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಗೀಡಾದ ಆರ್ ಎಸ್ ಎಸ್ ಕಾರ್ಯಕರ್ತನನ್ನು 27 ವರ್ಷದ ಸಂಜೀತ್ ಎಂದು ಗುರುತಿಸಲಾಗಿದೆ.
ತನ್ನ ಕುಟುಂಬದ ಜತೆ ತೆರಳುತ್ತಿದ್ದ ವೇಳೆ ದಾಳಿಕೋರರು ಏಕಾಏಕಿ ದಾಳಿ ಮಾಡಿ ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸಂಜೀತ್ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ತನ್ನ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಎಂದು ಹೇಳಲಾಗುತ್ತಿದೆ. ಸಂಜೀತ್‌ನ ದೇಹದ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ 50ಕ್ಕೂ ಹೆಚ್ಚು ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ವ್ಯಾಪಕ ಭದ್ರತೆ ಕೈಗೊಂಡಿದ್ದಾರೆ.