ಕೇರಳ ೮ ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್

ತಿರುವನಂತಪುರಂ,ಜೂ.೧೦- ಕೇರಳದಲ್ಲಿ ಮುಂಗಾರು ಮಳೆ ಆರಂಭದ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ೮ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ” ಯಲ್ಲೋ ಅಲರ್ಟ್” ಘೋಷಿಸಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್, ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.ಮುಂಗಾರಿನ ಬಾರಿ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಜನರು ಅದರಲ್ಲಿಯೂ ಕರಾವಳಿ ತೀರ ಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೇರಳದಲ್ಲಿ ಮುಂದಿನ ೩೬ ಗಂಟೆಗಳಲ್ಲಿ ಬಿಪಾರ್ಜೋಯ್ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.ಮುಂದಿನ ೪೮ ಗಂಟೆಗಳಲ್ಲಿ ಕೇರಳದ ಉಳಿದ ಭಾಗಗಳು ಮತ್ತು ತಮಿಳುನಾಡು, ಕರ್ನಾಟಕದ ಕೆಲವು ಭಾಗಗಳು ಮತ್ತು ಈಶಾನ್ಯ ಭಾಗಗಳಿಗೆ ಮುಂಗಾರು ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ನೈಋತ್ಯ ಮಾನ್ಸೂನ್ ಜೂನ್ ೧ ರ ಸಾಮಾನ್ಯ ದಿನಾಂಕದ ಒಂದು ವಾರದ ನಂತರ ಕೇರಳದ ಮೇಲೆ ತನ್ನ ಆರಂಭದೊಂದಿಗೆ ಗಭಾರತಕ್ಕೆ ಅಪ್ಪಳಿಸಿದೆ ಎಂದು ತಿಳಿಸಿದೆ.ಮುಂದಿನ ೩೬ ಗಂಟೆಗಳಲ್ಲಿ ಬಿಪಾರ್ಜೋಯ್ ಚಂಡಮಾರುತ ತೀವ್ರಗೊಳ್ಳಲಿದೆ ಮತ್ತು ಇನ್ನೆರಡು ದಿನಗಳಲ್ಲಿ ವಾಯುವ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್‌ನಲ್ಲಿ ತಿಳಿಸಿದೆ.ಮೀನುಗಾರರಿಗೆ ಅರಬ್ಬಿ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಸಮುದ್ರದಲ್ಲಿ ಇದ್ದವರು ಕರಾವಳಿಗೆ ಮರಳಲು ಸೂಚಿಸಲಾಗಿದೆ ಎಂದು ಅದು ಮೊದಲೇ ಹೇಳಿತ್ತು.