ಕೈಕೊಟ್ಟ ಪ್ರಿಯಕರ: ಆತ್ಮಹತ್ಯೆಗೆ ಶರಣಾದ ಯುವತಿ

ಕಲಬುರಗಿ,ಮೇ.11-ಯುವಕನೊಬ್ಬ ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ನಂತರ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ರಸ್ತೆಯ ಕೋಟನೂರ (ಡಿ) ಸಮೀಪದ ಯಲ್ಲಾಲಿಂಗ ಕಾಲೋನಿಯಲ್ಲಿ ನಡೆದಿದೆ.
ಪುಷ್ಪಾ ತಂದೆ ತುಕಾರಾಮ ಆತ್ಮಹತ್ಯೆಗೆ ಶರಣಾದ ಯುವತಿ.
ಫಿಲ್ಟರ್‍ಬೆಡ್ ಕಾಲೋನಿಯ ಕಿರಣ್ ಎಂಬ ಯುವಕ ಪುಷ್ಪಾಳನ್ನು ಪ್ರೀತಿಸುತ್ತಿದ್ದ. ಮದುವೆಯಾಗುವುದಾಗಿಯೂ ಹೇಳಿದ್ದ. ಆದರೆ ಆ ನಂತರ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪುಷ್ಪಾ ಯಲ್ಲಾಲಿಂಗ ಕಾಲೋನಿಯಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.