ಕೈಗಾರಿಕಾ ವಲಯದ ಅಭಿವೃದ್ಧಿಗೆ ಕ್ರಮ; ನಿರಾಣಿ

ಬೆಂಗಳೂರು,ಸೆ.೨೨- ರಾಜ್ಯದ ಕೈಗಾರಿಕಾ ವಲಯವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವುದೇ ಬಿಜೆಪಿ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಕರ್ನಾಟಕ ರಾಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕೈಗಾರಿಕಾ ವಲಯದ ಸಮಗ್ರ ಅಭಿವೃದ್ಧಿಗಾಗಿ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಕೈಗಾರಿಕಾ ವಲಯದಲ್ಲಿ ಹಾಗೂ ರಫ್ತು ಕ್ಷೇತ್ರದಲ್ಲಿ ಸಾಧನೆ ಮಾಡಿದ ಕೈಗಾರಿಕೋದ್ಯಮಿಗಳನ್ನು ಸನ್ಮಾನಿಸಿರುವುದಕ್ಕೆ ನಿರಾಣಿ ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿ ಅಧ್ಯಕ್ಷ ಡಾ. ಐ.ಎಸ್ ಪ್ರಸಾದ್ ಸೇರಿದಂತೆ ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.