ಕೈಗಾರಿಕಾ ಸ್ನೇಹಿ ತೆರಿಗೆ: ಶೆಟ್ಟರ್

ಬೆಂಗಳೂರು ಜು. ೨೨- ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಸರ್ಕಾರ ಮುಂದಾಗಿದ್ದು ಈ ಬಗ್ಗೆ ಶೀಘ್ರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೂಚಿಸಿದ್ದಾರೆ.
ಕೈಗಾರಿಕೆಗಳ ಮೇಲೆ ಹಾಕಲಾಗುತ್ತಿರುವ ತೆರಿಗೆಗಳು ಬಹಳ ಹೆಚ್ಚಾಗಿವೆ. ಖಾಲಿ ಇರುವ ಜಾಗದ ಮೇಲೂ ಬಹಳಷ್ಟು ತೆರಿಗೆ ಹಾಕಲಾಗುತ್ತಿದೆ. ಅಲ್ಲದೆ, ತೆರಿಗೆ ಪದ್ದತಿಯಲ್ಲಿ ರಾಜ್ಯಾದ್ಯಂತ ಪಾರದರ್ಶಕ ಹಾಗೂ ಒಂದೇ ರೀತಿಯ ತೆರಿಗೆ ಪದ್ದತಿ ಅಳಡಿಸಿಕೊಳ್ಳುವುದು ಬಹಳ ಅವಶ್ಯಕವಾಗಿದೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದಾರೆ.
ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಪದ್ದತಿಯ ಅನುಷ್ಠಾನಕ್ಕೆ ಅಗತ್ಯವಿರುವ ಸುಧಾರಣೆಗಳನ್ನು ಶೀಘ್ರ ಕೈಗೊಳ್ಳುವಂತೆ ಸೂಚನೆ ನೀಡಿದರು.
ಮುಂದಿನ ವಾರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆಯ ಆಯುಕ್ತರುಗಳನ್ನು ಒಳಗೊಂಡ ಸಭೆ ಆಯೋಜಿಸಬೇಕು. ಆ ಸಭೆಯಲ್ಲಿ ರಾಜ್ಯಾದ್ಯಂತ ಕೈಗಾರಿಕೆಗಳಿಂದ ಬಾಕಿ ಇರುವ ತೆರಿಗೆಯ ಬಗ್ಗೆ ಮಾಹಿತಿ ಪಡೆದುಕೊಂಡು, ಒಂದು ಬಾರಿಯ ವಿಶೇಷ ಯೋಜನೆ ಘೋಷಿಸುವ ನಿರ್ಧಾರಗ ತಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ನಗರಾಭಿವೃದ್ದಿ ಸಚಿವ ಬಿ ಎ ಬಸವರಾಜ್ ಮಾತನಾಡಿ, ಕೈಗಾರಿಕೆಗಳಿಗೆ ಪ್ರತ್ಯೇಕವಾಗಿ ಇನ್ನೊಂದು ಸ್ಲಾಬನ್ನು ರಚಿಸುವ ನಿಟ್ಟಿನಲ್ಲಿ, ಹಳೆಯ ತೆರಿಗೆಯನ್ನು ಒನ್ ಟೈಂ ಸೆಟಲ್‌ಮೆಂಟ್ ಬಗ್ಗೆ ಹಾಗೂ ತೆರಿಗೆಯಲ್ಲಿ ರಿಬೇಟ್ ನೀಡುವ ನಿಟ್ಟಿನಲ್ಲಿ ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯ ಮುಂದಿಡಲಾಗುವುದು ಎಂದು ಹೇಳಿದರು.
ಪೌರಾಡಳಿತ ಸಚಿವಎಂ.ಟಿ.ಬಿ ನಾಗರಾಜ್ ಮಾತನಾಡಿ ಕೈಗಾರಿಕೆಗಳಿಗೆ ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ತೀವ್ರ ತೊಂದರೆ ಆಗಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯವಿರುವಂತಹ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.