ಕೈನದ್ದು ಆಮದು ರಾಜನೀತಿ ಸಿಎಂ ಗೇಲಿ

ಬೆಂಗಳೂರು,ಏ.೧೩:ಕಾಂಗ್ರೆಸ್ ಪಕ್ಷಕ್ಕೆ ೬೦ ರಿಂದ ೬೫ ಕಡೆ ಸಮರ್ಥ ಅಭ್ಯರ್ಥಿಗಳೇ ಇಲ್ಲ, ಹಾಗಾಗಿ, ಅಭ್ಯರ್ಥಿಗಳ ಪಟ್ಟಿಯನ್ನು ೧೬೫ಕ್ಕೆ ನಿಲ್ಲಿಸಿಬಿಟ್ಟಿದ್ದಾರೆ. ಅವರದ್ದು ಆಮದು ರಾಜನೀತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೇಲಿ ಮಾಡಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗಾರರೊ
ದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇದುವೆಗೂ ೩ನೇ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಆರಂಭದಲ್ಲಿ ಶೂರತ್ವ ತೋರಿದರು. ೬೦ ರಿಂದ ೬೫ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಲ್ಲ. ೧೬೬ಕ್ಕೆ ಅಭ್ಯರ್ಥಿಗಳ ಪಟ್ಟಿ ನಿಲ್ಲಿಸಿಬಿಟ್ಟಿದ್ದಾರೆ. ಪಟ್ಟಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಇದರ ಅರ್ಥ ಆಮದು ಮಾಡುವ ರಾಜನೀತಿ. ಬೇರೆ ಪಕ್ಷಗಳಲ್ಲಿ ಅಭ್ಯರ್ಥಿಗಳನ್ನು ಹುಡುಕಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್‌ನಲ್ಲಿ ಸಮರ್ಥ ಅಭ್ಯರ್ಥಿ ಇಲ್ಲ, ಹಾಗಾಗಿ, ಬಿಜೆಪಿಯಿಂದ ಯಾರಾದರು ಬರುತ್ತಾರಾ ಎಂದು ಕಾಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ೧೨ ಕ್ಷೇತ್ರಗಳನ್ನೊರತುಪಡಿಸಿ ಉಳಿದ ಕಡೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕೆಲವು ಕಡೆ ಟಿಕೆಟ್ ಆಕಾಂಕ್ಷಿಗಳು, ವಿಧಾನ ಪರಿಷತ್ ಸದಸ್ಯರುಗಳು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಕೊಟ್ಟಿರುವ ಎಲ್ಲರ ಜತೆ ಪಕ್ಷದ ಹಿರಿಯರು ಹಾಗೂ ನಾನು ಮಾತನಾಡಿದ್ದೇನೆ ಎಂದರು.
ಚುನಾವಣಾ ಸಂದರ್ಭದಲ್ಲಿ ಆ ಕಡೆ ಈ ಕಡೆ ಹೋಗುವವರು ಸಹಜ ಹಾಗೂ ಸಾಮಾನ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಮನವೊಲಿಸಲು ಸಮಯ ಬೇಕು, ಅವರು ನನಗಿಂತ ಹಿರಿಯರು, ಎಲ್ಲವೂ ಸರಿ ಹೋಗುತ್ತದೆ ಎಂಬ ವಿಶ್ವಾಸ ತಮ್ಮದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.