ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

ಕೋಲಾರ,ಅ.೩-ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಹುಣ್ಣಿಮೆಯಂದು ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹುಣ್ಣಿಮೆ ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾಮಂಗಳಾರತಿಯನ್ನು ಮಾಡಲಾಯ್ತು. ರಥೋತ್ಸವವನ್ನು ನಡೆಸಲಾಯಿತು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಹುಣ್ಣಿಮೆ ಪ್ರಯುಕ್ತ ನಾದಸುಧಾರಸ ವೇದಿಕೆಯಲ್ಲಿ ಅಖಂಡ ಸಂಕೀರ್ತನೆಯನ್ನು ಏರ್ಪಡಿಸಲಾಗಿತ್ತು.
ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ :
ಆಲಂಬಗಿರಿ ದೇವಾಲಯದಿಂದ ಸುಮಾರು ೧ ಕಿ.ಮೀ ದೂರದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತೊಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಹುಣ್ಣಿಮೆ ಗಿರಿಪ್ರದಕ್ಷಿಣೆಯಲಿ ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ|| ಎಂ.ಆರ್.ಜಯರಾಮ್ ರವರು ಭಾಗವಹಿಸಿದ್ದರು. ಅವರೊಂದಿಗೆ ಹಲವಾರು ಭಕ್ತರು ಗಿರಿಪ್ರದಕ್ಷಿಣೆ ಮಾಡಿದರು.