ಕೈ ಗೆ ರೆಡ್‌ಕಾರ್ಡ್: ಮೋದಿ ವ್ಯಂಗ್ಯ

ಗುವಾಹಟಿ,ಏ.೧- ಅಸ್ಸಾಂ ವಿಧಾನಸಭೆಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಿಗೆ ರಾಜ್ಯದ ಜನರು ಕೆಂಪುಕಾರ್ಡ್ ತೋರಿಸಿದ್ದಾರೆಂದು ಪ್ರಧಾನಿ ನರೇಂದ್ರಮೋದಿ ವ್ಯಂಗ್ಯವಾಡಿದ್ದಾರೆ.
ಕೊಕ್ರಜಾರ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮೊದಲ ಹಂತದ ಚುನಾವಣೆಯಲ್ಲಿ ಮತದಾರರು ಎನ್‌ಡಿಎಗೆ ಆರ್ಶೀವಾದ ಮಾಡಿದ್ದಾರೆ ಎಂದರು.
ಅಸ್ಸಾಂನಲ್ಲಿ ಫುಟ್ಬಾಲ್ ಅತ್ಯಂತ ಜನಪ್ರಿಯ ಕ್ರೀಡೆ, ಅದೇ ಭಾಷೆಯಲ್ಲಿ ಹೇಳುವುದಾದರೆ ಜನರು ಮೊದಲ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರೆಡ್‌ಕಾರ್ಡ್ ತೋರಿಸಿದ್ದಾರೆಂದು ಗೇಲಿ ಮಾಡಿದರು.
ಕೊಕ್ರಜಾರ್‌ನಲ್ಲಿ ನಡೆದ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿರುವ ಪಕ್ಷದ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಇದು ಅಧಿಕಾರಕ್ಕೆ ಹಾತೊರೆಯುತ್ತಿರುವ ಕಾಂಗ್ರೆಸ್‌ನ ಕುತಂತ್ರ ರಾಜಕಾರಣ ಎಂಬುದನ್ನು ಬಿಂಬಿಸುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ ಯಾರ ಜತೆ ಬೇಕಾದರು ಮೈತ್ರಿ ಮಾಡಿಕೊಳ್ಳುವ ಮೂಲಕ ಆ ಪಕ್ಷ ರಾಜ್ಯದ ಜನತೆಗೆ ದ್ರೋಹ ಮಾಡಿದೆ ಎಂದು ಕಿಡಿಕಾರಿದರು.