
ಕೆ.ಆರ್.ಪುರ,ಆ.೨೭- ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಕಾಂಗ್ರೆಸ್ ಪಕ್ಷ ನೀಡಿರುವ ಶಕ್ತಿಯೋಜನೆ, ಗೃಹಲಕ್ಷ್ಮಿ,ಗೃಹಜ್ಯೋತಿ, ಸೇರಿದಂತೆ ಜನಪರ ಯೋಜನೆಗಳು ಹೆಚ್ಚು ಸಹಕಾರಿ ಯಾಗಿದೆ ಎಂದು ಕೆ.ಪಿ.ಸಿ.ಸಿ.ಕಾರ್ಯದರ್ಶಿಡಿ.ಕೆ.ಮೋಹನ್ ಅವರು ತಿಳಿಸಿದರು.
ಕೆ.ಆರ್.ಪುರ ಕ್ಷೇತ್ರದ ಹೊರಮಾವು ವಾರ್ಡನ ಕ್ಯಾಲಸನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಚೇರಿ ಹಾಯ ಸೇವಾಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಗೃಹಜ್ಯೋತಿ, ಶಕ್ತಿ ಯೋಜನೆ ಸೇರಿದಂತೆ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿಗಳನ್ನು ನೀಡುವ ಮೂಲಕ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ನುಡಿದರು.
ಅನ್ನಭಾಗ್ಯ ಯೋಜನೆಯು ಸಹ ಲಕ್ಷಾಂತರ ಮಂದಿಯ ಜೀವನಕ್ಕೆ ಆಧಾರವಾಗಿದ್ದು,ಇದರಿಂದ ಬಡವರ ಹಾಗೂ ಮಧ್ಯಮ ವರ್ಗದವರ ಜೀವನ ಮಟ್ಟ ಸುಧಾರಣೆಯಾಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಕೆ.ಆರ್.ಪುರ ಕ್ಷೇತ್ರ ಹಾಗೂ ರಾಜ್ಯದಲ್ಲಿ ಅಭೂತಪೂರ್ವವಾದ ಬೆಂಬಲ ದೊರೆತಿದ್ದು, ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಅತ್ಯುತ್ತಮ ಆಡಳಿತ ನೀಡಲಿದೆ ಎಂದು ವಿವರಿಸಿದರು.ಕೆ.ಆರ್.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತಿರುವುದು ಸಂತಸ ತಂದಿದೆ,ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು ಒಗ್ಗಟ್ಟಿನಲ್ಲಿ ಮುಂದುವರೆಯುತ್ತೆವೆ ಎಂದು ನುಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ವೆಂಕಟೇಶ್, ಆಯೋಜಕ ಕ್ಯಾಲಸನಹಳ್ಳಿ ಶ್ರೀನಿವಾಸ್, ಕಾಂಗ್ರೆಸ್ ಹಿರಿಯ ಮುಖಂಡ ಅಗರ ಆರ್. ಪ್ರಕಾಶ್, ವಾರ್ಡನ ಅಧ್ಯಕ್ಷರಾದ ಪ್ರಸನ್ನ,ಸುನೀಲ್, ಬಾಬು ಮುಖಂಡರರಾದ ಮಾರೇಶ್, ವಿನೋದ್ ಕುಮಾರ, ಮಂಜುನಾಥ, ಮಾರುತಿ,ಕಿರಣ್ ,ಮುನಿಕೃಷ್ಣ,ಹರೀಶ್, ಕೆ.ಮಾದೇವಿ,ಕಲಾದೇವಿ ಇದ್ದರು.