ಕೆ.ಆರ್.ಪುರ,ಮಾ.೩೦- ಮಹದೇವಪುರ ಕ್ಷೇತ್ರದ ಶೀಗೇಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೊಮ್ಮಸಂದ್ರ ಮಧು ಹಾಗೂ ಸಂಘಡಿಗರು ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಅರವಿಂದ ಲಿಂಬಾವಳಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಪಕ್ಷ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ ಅವರು ಮಹದೇವಪುರ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್‌ನ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಪಕ್ಷಕ್ಕೆ ಬರುವವರಿಗೆ ಸ್ವಾಗತ. ಪಕ್ಷಕ್ಕೆ ಬಂದ ಬಳಿಕ ಹಳಬರು ಹೊಸಬರು ಎಂದು ನೋಡದೆ ಎಲ್ಲರನ್ನೂ ಒಟ್ಟಿಗೆ ಕಾಣುತ್ತ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷ ದೊಮ್ಮಸಂದ್ರ ಮಧು ಮಾತನಾಡಿ ಶಾಸಕ ಅರವಿಂದ ಲಿಂಬಾವಳಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದೇನೆ. ನಮ್ಮ ಭಾಗದಲ್ಲಿ ಬಿಜೆಪಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಟರಾಜ್, ಮಾಜಿ ಪಂಚಾಯತಿ ಸುರೇಶ್‌ಬಾಬು, ವೇಲು, ರೇಖಾ ಮತ್ತಿತರರಿದ್ದರು.