ಕೈ ನಲ್ಲಿ ಸಿಎಂ ಆಗಲು ಬಹಳ ಮಂದಿ ಇದ್ದಾರೆ:ಜಾರಕಿಹೊಳಿ

ಬಾಗಲಕೋಟೆ, ಜ 7- ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಾತ್ರವಲ್ಲ ಬಹಳಷ್ಟು ಮಂದಿ ಇದ್ದಾರೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾ ಕೆತನಾಡಿದ ಅವರು, ಸಿಎಂ ಹುದ್ದೆ ವಿಚಾರದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಗೊಂದಲವಿದೆ. ಎಲ್ಲರಿಗೂ ಮುಖ್ಯಮಂತ್ರಿಯಾಯಬೇಕೆಂಬ ಆಸೆ ಇರುತ್ತದೆ. ಕೆಲವರು ಬಹಿರಂಗವಾಗಿ ಹೇಳಿಕೆ ನೀಡಿದರೆ ಮತ್ತೆ ಕೆಲವರು ಹೇಳಿಕೊಳ್ಳುತ್ತಾರೆ. ಅದೇನೂ ದೊಡ್ಡ ವಿಷಯವಲ್ಲ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 113 ಸ್ಥಾನಗಳನ್ನು ಗೆಲ್ಲಬೇಕು. ಆನಂತರ ಸಿಎಂ ನಿರ್ಧರಿಸಲಾಗುತ್ತದೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಮುಖ್ತಮಂತ್ರಿಯಾಗಿ ಯಡಿಯೂರಪ್ಪನವರು ಮುಂದುವರೆಯಲಿದ್ದಾರೊ ಇಲ್ಲವೊ ಗೊತ್ರಿಲ್ಲ.‌ಆದರೆ ಮುಂಬರುವ ವಿಧಾನಸಭಾ‌ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಲಿದೆ ಎಂದು ಹೇಳಿದರು.