ಕೈ ನಾಯಕರ ವಿರುದ್ಧ ಎಫ್‌ಐಆರ್

ಇಂದೋರ್,ಆ.೧೩-ಮಧ್ಯಪ್ರದೇಶದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪ ಮಾಡಿರುವುದಕ್ಕೆ ಸಂಬಂಧಿಸಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಶನಿವಾರ ತಡರಾತ್ರಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ ಎಂದು ಸ್ಥಳೀಯ ಬಿಜೆಪಿಯ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ದೂರಿದ್ದಾರೆ.

೫೦ರಷ್ಟು ಕಮಿಷನ್ ನೀಡುವಂತೆ ರಾಜ್ಯದ ಗುತ್ತಿಗೆದಾರರಿಗೆ ಕೇಳಲಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ನಗರದ ಸಂಯೋಗಿತಗಂಜ್ ಪೊಲೀಸ್ ಠಾಣೆಯಲ್ಲಿ ಅವಸ್ಥಿ ಪ್ರಿಯಾಂಕಾ ಗಾಂಧಿ,ಕಮಲ ನಾಥ್ ಹಾಗೂ ಅರುಣ್ ಯಾದವ್ ಅವರ ಟ್ವಿಟರ್ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.