ಕೈ ಮುಖಂಡ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆ

ನವದೆಹಲಿ, ಜೂ.9- ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ್ ಇಂದು ವಿಧ್ಯುಕ್ತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಕೇಂದ್ರ ರೈಲ್ವೆ ಸಚಿವ ಪಿಯೂಪ್ ಗೋಯಲ್ ಹಾಗೂ ಬಿಜೆಪಿ ಮುಖ್ಯ ವಕ್ತಾರ ಅನಿಲ್ ಬಲುನಿ ಸಮ್ಮುಖದಲ್ಲಿ ‌ಬಿಜೆಪಿಗೆ ಸೇರ್ಪಡೆಯಾದರು.
ಮುಂದಿನ ವರ್ಷ ಉತ್ತರ ಪ್ರದೇಶ‌‌ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿತಿನ್ ಸೇರ್ಪಡೆಯಿಂದಾಗಿ ಬಿಜೆಪಿಗೆ ಮತ್ತಷ್ಟು ಬಲಬಂದಂತಾಗಿದ್ದು, ಪ್ರತಿ ಪಕ್ಷ ಕಾಂಗ್ರೆಸ್ ಗೆ ಭಾರೀ ಪೆಟ್ಟು ಬಿದ್ದಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ಯಾವುದಾದರೂ ರಾಷ್ಟ್ರೀಯ ಪಕ್ಷ ದೇಶದಲ್ಲಿದ್ದರೆ ಅದು ಬಿಜೆಪಿ ಮಾತ್ರ. ಉಳಿದ ಪಕ್ಷಗಳು ಕೆಲವು ಜನರಿಗೆ ಮಾತ್ರ ಸೀಮಿತವಾಗಿದೆ ಎಂದು ತಿಳಿಸಿದರು.
ಇನ್ನು ಮುಂದೆ ನಿಷ್ಠಾವಂತ ಕಾರ್ಯಕರ್ತನಾಗಿ ಮುಂದುವರೆಯುತ್ತ್ತೇನೆ. ಜನರಿಗೆ ಕೆಲಸ ಮಾಡ‌ಬೇಕಾದರೆ ಬಿಜೆಪಿ ಸೂಕ್ತ ಪಕ್ಷವಾಗಿದೆ. ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದರು.
ಬ್ರಾಹ್ಮಣ ಸಮುದಾಯಕ್ಕೆ ಸೇರಿದ 47 ವರ್ಷದ ಜಿತಿನ್ ಪ್ರಸಾದ್ ಕೇಂದ್ರದಲ್ಲಿ ಸಚಿವರಾಗಿದ್ದರು. ಈ ಮೊದಲು ಪಶ್ಚಿಮ ಬಂಗಾಳ ಕಾಂಗ್ರೆಸ್ ಉಸ್ತುವಾರಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.