ಕೈ ಸುಳ್ಳು ಗ್ಯಾರೆಂಟಿ ನಂಬಲ್ಲ

ಬೆಂಗಳೂರು, ಡಿ. ೩- ಮಿನಿ ಮಹಾಸಮರದಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಸುಳ್ಳು ಗ್ಯಾರೆಂಟಿಗಳನ್ನು ಮತದಾರರು ನಂಬುವುದಿಲ್ಲ ಎಂಬುದು ಫಲಿತಾಂಶದಿಂದ ಸಾಬೀತಾಗಿದೆ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಕರಂದ್ಲಾಜೆ ಹೇಳಿದರು.
ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ಲಭಿಸಿದೆ ಎಂದು ಬಣ್ಣಿಸಿದರು.
ಕಾಂಗ್ರೆಸ್ ಪಕ್ಷದ ಸುಳ್ಳು ಗ್ಯಾರೆಂಟಿಗಳನ್ನು ಮತದಾರರು ನಂಬುವುದಿಲ್ಲ ಎಂಬುದು ಫಲಿತಾಂಶದಿಂದ ದೃಢಪಟ್ಟಿದೆ. ಇದಕ್ಕಾಗಿ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಭಾರತೀಯ ಜನತಾ ಪಕ್ಷದ ನೇತೃತ್ವದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಶೋಭಾ ವಿಶ್ವಾಸ ವ್ಯಕ್ತಪಡಿಸಿದರು.