
ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಏ.4 :- . ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ (ಇಂದು ) ಕೂಡ್ಲಿಗಿಯ ಮಾಜಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಂಎಲ್ಸಿಗಳಾದ ಪ್ರಕಾಶ್ ರಾಥೋಡ್, ದಿನೇಶ್ ಗೂಳಿಗೌಡ, ಮಾಜಿ ಮೇಯರ್ ಜೆ ಹುಚ್ಚಪ್ಪ ಮತ್ತಿತರರು ಉಪಸ್ಥಿತರಿದ್ದರು.