ಕೊಂಗಳಿ ಗ್ರಾಮದಲ್ಲಿನ ಅಂಗನವಾಡಿ ಕಟ್ಟಡ ಉದ್ಘಾಟನೆ

ಭಾಲ್ಕಿ :ಜು.20:ತಾಲೂಕಿನ ಕೊಂಗಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮಂಗಲಾ ಉಮರ್ಗೆ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಏಕನಾಥ್ ಕಾರಬಾರಿ ಜರುಗಿತು.
“ಇದೆ ಸಂಧರ್ಬದಲ್ಲಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಏಕನಾಥ್ ಅವರು ಗ್ರಾಮದ ಗಡಿ ಭಾಗದ ಮಕ್ಕಳಿಗೆ ಅನುಕೂಲವಾಗಲಿ ಎಂದು ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದೆ. ಎಂದೂ ಹೇಳಿದರು.”
” ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಈ ಅಂಗನವಾಡಿ ಕೇಂದ್ರವನ್ನು ಉತ್ತಮವಾಗಿ ನಿರ್ವಹಣೆ ಮಾಡುವುದ ಜೊತೆಗೆ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.”
” ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ದುಶಾಂತ್ ಶಾಂತಾಬಾಯಿ , ಮಾರುತಿ ಮೇಹತ್ರೇ, ಅನುಸಯಾ ಕಿಶನ್,ಮೇಲ್ವಿಚಾರಕಿ ಲಕ್ಷ್ಮಿಬಾಯಿ, ಅಂಗನವಾಡಿ ಕಾರ್ಯಕರ್ತೆಯರಾದ ಸುಮನಬಾಯಿ , ಚಂದ್ರಕಲಾ, ದೈವತಶೀಲ ಹಾಗೂ ಮಕ್ಕಳೂ,ಗರ್ಭವತಿ ಮಹಿಳೆಯರೂ ಸೇರಿ ಹಲವಾರು ಹಾಜರಿದ್ದರು.