ಕೊಂಡಜ್ಜಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ; ಮಕ್ಕಳೊಂದಿಗೆ ಶೈಕ್ಷಣಿಕ ಚಟುವಟಿಕೆಗಳ ಪರಿಶೀಲನೆ

ಸಂಜೆವಾಣಿ ವಾರ್ತೆದಾವಣಗೆರೆ; ಜು.19; ಪರಿಶಿಷ್ಟ ಪಂಗಡಗಳ ಇಲಾಖೆಯಡಿ ನಡೆಸಲಾಗುತ್ತಿರುವ ಕೊಂಡಜ್ಜಿಯ ಇಂದಿರಾಗಾಂಧಿ ವಸತಿ ಶಾಲೆಗೆ  ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.ಸರ್ಕಾರ ಮಕ್ಕಳ ಭವಿಷ್ಯಕ್ಕಾಗಿ ವಸತಿ ಶಾಲೆಗಳನ್ನು ಸ್ಥಾಪನೆ ಮಾಡುವ ಮೂಲಕ ಬಡ ಮಕ್ಕಳಿಗೆ ಅನುಕೂಲತೆಗಳನ್ನು ಕಲ್ಪಿಸಿದೆ. ಈ ಹಿಂದೆ ಇಂತಹ ಸೌಲಭ್ಯಗಳು ಇರಲಿಲ್ಲ, ಈಗ ಇಂತಹ ಸೌಲಭ್ಯ ನಿಮಗೆ ಕಲ್ಪಿಸಲಾಗಿದ್ದು ಮಕ್ಕಳು ದೇಶದ ಆಸ್ತಿಯಾಗಬೇಕೆಂದು ಇಂತಹ ಸೌಲಭ್ಯ ಕಲ್ಪಿಸಿದ್ದು ಇದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮಕ್ಕಳಿಗೆ ತಿಳಿಸಿದರು. ಶಾಲೆಯಲ್ಲಿ ಸುಚಿತ್ವವನ್ನು ಕಾಪಾಡಿಕೊಳ್ಳಬೇಕೆಂದು ಪ್ರಾಂಶುಪಾಲರಿಗೆ ತಿಳಿಸಿ ಇದೇ ವೇಳೆ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿ ಅತ್ಯುತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.ಈ ವೇಳೆ ಪ್ರಾಂಶುಪಾಲರಾದ ರೂಪ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.