ಕೊಂಬೆಟ್ಟು; ಮರದ ಕೊಂಬೆಗಳ ತೆರವು ಕಾರ್ಯಾಚರಣೆ

ಪುತ್ತೂರು, ಆ.೨೮- ನಗರದ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜ್ ರಸ್ತೆಯ ಇಕ್ಕೆಡೆಗಳಲ್ಲಿರುವ ಅಪಾಯಕಾರಿ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಗುರುವಾರ ಮೆಸ್ಕಾಂ, ನಗರಸಭೆ, ಅರಣ್ಯ ಇಲಾಖೆ ಮತ್ತು ಸಂಚಾರ ಪೊಲೀಸರ ಸಹಕಾರದೊಂದಿಗೆ ನಡೆಸಲಾಯಿತು.
ಕಳೆದ ಗುರುವಾರ ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ಥಳಕ್ಕೆ ಭೇಟಿ ನೀಡಿ ಅಪಾಯಕಾರಿ ಮರಗಳ ಕೊಂಬೆಗಳನ್ನು ತೆರವು ಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು. ಕೊಂಬೆಟ್ಟು ರಸ್ತೆಯ ಇಕ್ಕೆಡೆಗಳಲ್ಲಿರುವ ಅಪಾಯಕಾರಿ ರೆಂಬೆಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಿವಾಸಿಗಳು ಬೇಡಿಕೆ ಸಲ್ಲಿಸುತ್ತಾ ಬಂದಿದ್ದರು. ಪುರಸಭೆ ಮತ್ತು ನಗರಸಭೆಯಿಂದ ಯಾವುದೇ ಸ್ಪಂದನ ವ್ಯಕ್ತವಾಗಿರಲಿಲ್ಲ. ನಗರಸಭೆಯ ಹಾಲಿ ಬಿಜೆಪಿ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ನಿವಾಸಿಗಳ ಬೇಡಿಕೆಗೆ ಸ್ಪಂಧಿಸುವ ಮೂಲಕ ತೆರವು ಕಾರ್ಯಾಚರಣೆ ನಡೆಯಿತು.