ಕೊಟ್ಟೂರಿನ 2 ಕೇಂದ್ರಗಳ ದ್ವಿತೀಯ ಪಿಯು ಪರೀಕ್ಷೆ, 65 ವಿದ್ಯಾರ್ಥಿಗಳು ಗೈರು


ಸಂಜೆ ವಾಣಿ ವಾರ್ತೆ
ಕೊಟ್ಟೂರು:ಮಾ,9- ಪಟ್ಟಣದಲ್ಲಿ ಸಹ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭಗೊಂಡಿವೆ.
 ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಕೊಟ್ಟೂರೇಶ್ವರ ಪದವಿ ಪೂರ್ವ ಕಾಲೇಜ್ ಎರಡು ಕೇಂದ್ರಗಳಲ್ಲಿ ಪರೀಕ್ಷೆ  ನಡೆಯುತ್ತಿದ್ದು, ಪ್ರಥಮ ಭಾಷೆ ಕನ್ನಡ ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳು ಹಾಜರಾಗಿದ್ದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ 1362 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 56 ವಿದ್ಯಾರ್ಥಿಗಳು ಗೈರು ಹಾಜರಾಗಿ, 1306 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು, 47 ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 47ನೇ ಕೊಠಡಿಯಲ್ಲಿ ಇಬ್ಬರು ಅಂದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದಾರೆ, ಪ್ರತಿ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ
ಕೊಟ್ಟೂರೇಶ್ವರ ಕಾಲೇಜ್ ಕೇಂದ್ರದಲ್ಲಿ 684 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದು, 9 ವಿದ್ಯಾರ್ಥಿಗಳು ಗೈರು ಹಾಜರಾಗಿ, 675 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು.

One attachment • Scanned by Gmail