ಕೊಟ್ಟೂರು ಕಸಾಪ ನಾಳೆ ಚುನಾವಣೆ : 736 ಮಂದಿಗೆ ಮತದಾನಕ್ಕೆ ಅವಕಾಶ

ಸಂಜೆ ವಾಣಿ ವಾರ್ತೆ
ಕೊಟ್ಟೂರು ನ 20 :ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ.ಪಟ್ಟಣದ ಹಳೆ ನಾಡಕಚೇರಿಯಮತಗಟ್ಟೆಯಲ್ಲಿಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆ ಎಂದು ಚುನಾವಣಾ ಅಧಿಕಾರಿ ಅಡದಲಿಶಶಿಧರ ಹೇಳಿದರು.ಈ ಬಾರಿ 736  ಮತದಾರರಿದ್ದು,  ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಅದೇ ದಿನ ಜಿಲ್ಲಾ ಕಸಾಪ ಚುನಾವಣಾಧಿಕಾರಿಗಳು ಮತಗಳನ್ನು ಎಣಿಕೆ ಮಾಡಿ, ಜಿಲ್ಲಾ ಘಟಕದ ಅಧ್ಯಕ್ಷರ ಚುನಾವಣಾ ಫಲಿತಾಂಶವನ್ನು ಘೋಷಿಸುತ್ತಾರೆ ಎಂದರು.

Attachments area