
ಸಂಜೆವಾಣಿ ವಾರ್ತೆ
ಕೊಟ್ಟೂರು, ಸೆ.01: ತಾಲೂಕಿನಾದ್ಯಂತ ಅನೇಕ ದಿನಗಳಿಂದ ಮಳೆ ಸುರಿಯದ ಹಿನ್ನೆಲೆಯಲ್ಲಿ ರೈತರ ಬೆಳೆಗಳೆಲ್ಲಾ ಒಣಗಿ ಹೋಗಿವೆ. ಇದರಿಂದ ರೈತರು ತಮ್ಮ ಜಮೀನುಗಳಿಗೆ ಖರ್ಚು ಮಾಡಿದ ಗೊಬ್ಬರ, ಬೀಜ ಕಾರ್ಮಿಕ ಕೂಲಿ ಸಹ ಭರದಂತಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಘನ ಸರ್ಕಾರವು ಕೊಟ್ಟೂರನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಕಳಿಸುವಂತೆ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಎನ್. ಭರ್ಮಣ್ಣ, ತಾಲೂಕು ಅಧ್ಯಕ್ಷರಾದ ಶ್ರೀಧರ್, ಶೇಖರಪ್ಪ, ನಿಜಲಿಂಗಪ್ಪ, ಹನುಮಂತಪ್ಪ, ಹಾಗೂ ಇತರರು ಉಪಸ್ಥಿತರಿದ್ದರು.