ಕೊಟ್ಟೂರು ಪೊಲೀಸ್ ಇಲಾಖೆಯಿಂದ ಜಾಗೃತಿ

ಕೊಟ್ಟೂರು, ನ.14: ಹಸಿರು ಪಟಾಕಿ ಬಳಕೆ ಮಾಡಿ ದೀಪಾವಳಿ ಹಬ್ಬವನ್ನು ಸರಳವಾಗಿ ಅರ್ಥಗರ್ಭಿತವಾಗಿ ಆಚರಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾಗರಿಕರು ಸಹಕರಿಸಬೇಕು ಎಂದುಪಿಎಸ್.ಐನಾಗಪ್ಪಮನವಿ ಮಾಡಿದರು.
ಪಟ್ಟಣದಲ್ಲಿ ಆಟೋಮೂಲಕ ಜಾಗೃತಿ ಮೂಡಿಸುವ ಆಟೋಕ್ಕೆ ಚಾಲನೆ ನೀಡಿಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡಿದೆ. ಈ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ರಾಜ್ಯ ಸರ್ಕಾರ ಕೊರೋನಾ ಸೋಂಕು ತಡೆಯಲು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೆಲವು ಮಾರ್ಗ ಸೂಚಿಗಳನ್ನು ನೀಡಿ ಆದೇಶವನ್ನು ಹೊರಡಿಸಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾರ್ವಜನಿಕರು ಸಹಕರಿಸಿರಿ ಎಂದರು. ಎ ಎಸ್.ಐ ವಸಂತರಾವ್, ಕೋಡಿಹಳ್ಳಿ ರಮೇಶ ಸೇರಿದಂತೆ ಇತರರು ಇದ್ದರು.