
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.26: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ ಭರವಸೆಗಳಿಗೆ ಮೊದಲು ಯಾವುದೇ ಕಂಡೀಷನ್ ಗಳು ಇರಲಿಲ್ಲ ಈಗ ಷರತ್ತುಗಳು ಎಂದು ಜನರನ್ನು ಮೋಸ ಮಾಡುತ್ತಿದ್ದಾರೆ ಈ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸಬೇಕಿದೆ ಎಂದು ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಹೇಳಿದ್ದಾರೆ.
ಅವರು ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಗರ ಘಟಕದಿಂದ ಹಮ್ಮಿಕೊಂಡಿದ್ದ ಆತ್ಮವಲೋಕನ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಚುನಾವಣೆಯಲ್ಲಿ ಕೊಟ್ಟ ಗ್ಯಾರೆಂಟಿ ಭರವಸೆಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿ ಈಡೇರಿಸುವುದಾಗಿ ಮಾತು ಕೊಟ್ಟಿತ್ತು ಆ ಮಾತನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ಆ ಬಗ್ಗೆ ಮತ ನೀಡಿ ಕಾಂಗ್ರೆಸ್ ಗೆಲ್ಲಿಸಿದ ಮತದಾರರಿಗೆ ಜಾಗೃತಿ ಮೂಡಿಸಿ ಹೋರಾಟ ಮಾಡೋಣ ಎಂದರು.
ಚುನಾವಣೆಯ ಸೋಲಿನ ಪರಾಮರ್ಶೆ ಮಾಡಿ. ಮುಂದೆ ಬರುವ ಜಿಪಂ, ತಾಪಂ, ಲೋಕಸಭೆ ಸೇರಿದಂತೆ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಎದುರಿಸಿ ಗೆಲ್ಲಬೇಕು ಎಂಬುದರ ಬಗ್ಗೆ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಿದರು.
ಭಾಜಪ ಬಂಧುಗಳು ಆತ್ಮಸ್ಥೈರ್ಯ, ಅಚಲ ಛಲ, ಗೆಲ್ಲುವ ಸಾಮರ್ಥ್ಯ ಹೊಂದಬೇಕು ಎಂದರು.
ಮಾಜಿ ಸಚಿವ ಹಾಲಪ್ಪ ಆಚಾರ, ಜಿಲ್ಲಾ ಅಧ್ಯಕ್ಷ ಗೋನಾಳ್ ಮುರಹರ ಗೌಡ, ಬಿ.ಶಿವಕುಮಾರ, ಅನಿಲ್ ನಾಯ್ಡು, ವೆಂಕಟೇಶ ಪಾಲಿಕೆ ಸದಸ್ಯರಾದ ಶ್ರೀನಿವಾಸ ಮೋತ್ಕರ್, ಗೋವಿಂದ ರಾಜುಲು, ಇಬ್ರಾಹಿಂ ಬಾಬು
ಹನುಮಂತಪ್ಪ ಕೆ. ಮತ್ತು ವಿವಿಧ ಹಂತದ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.