ಮುದಗಲ್,ಮೇ.೨೮-
ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಆಶೀರ್ವದಿಸಿದ್ದಾರೆ. ಕೊಟ್ಟ ಮಾತಿಗೆ ತಪ್ಪಲಾರೆನೆಂದು ಲಿಂಗಸುಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ. ವಜ್ಜಲ್ ಶನಿವಾರ ಹೇಳಿದರು.
ಪಟ್ಟಣ ಸಮೀಪದ ಛತ್ರ ಆಂಜನೇಯ ದೇವಸ್ಥಾನದಲ್ಲಿ ಆಂಜನೇಯನ ದರ್ಶನ ಪಡೆದು ನೆರೆದಿದ್ದ ಜನಸ್ತೋಮದ ಅಭಿನಂದನ ಸಮಾರಂಭದಲ್ಲಿ ಮಾತನಾಡಿ ಚುನಾವಣೆಯಲ್ಲಿ ಇಡೀ ಕ್ಷೇತ್ರದಲ್ಲಿ ಮತದಾರರಿಗೆ ಕೊಟ್ಟ ಮಾತಿಗೆ ನಾನು ಬದ್ಧನಾಗಿದ್ದೇನೆ.
ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಮತದಾರರಿಗೆ ದ್ರೋಹ ಬಗೆಯಲಾರೆ. ಮತದಾರಿಗೆ ಹಾಗೂ ಪಕ್ಷದg ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದರು. ಕ್ಷೇತ್ರದಲ್ಲಿ ಮತದಾರರು ಕೊಟ್ಟ ತೀರ್ಪಿಗೆ ಕುಡಿಯುವ ನೀರು, ಮುದಗಲ್ ಪಟ್ಟಣ ತಾಲೂಕು ಕೇಂದ್ರವನ್ನಾಗಿ ಘೋಷಣೆ, ಶಾಲಾ ಕೊಟ್ಟಡಿಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ದುಡಿಯಲು ಬದ್ಧನಾಗಿದ್ದೇನೆ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರು, ವಿವಿಧ ಗ್ರಾಮೀಣ ಭಾಗದ ಗ್ರಾಮಸ್ಥರು ಸೇರಿದಂತೆ ಇನ್ನಿತರರು ಇದ್ದರು.