ಕೊಡಗಿನಲ್ಲಿ 542 ಮತಗಟ್ಟೆಗಳು, 4,52,642 ಮತದಾರರು : ಏ.13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಮಡಿಕೇರಿ : ವಿಧಾನಸಭಾ ಚುನಾವಣೆ ಸಂಬಂಧ ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆ ಸಂಬಂಧ ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 542 ಮತಗಟ್ಟೆಗಳಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 269 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳು ಇವೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಒಟ್ಟು 4,52,642 ಮತದಾರರಿದ್ದು, 4,51,216 ಸಾಮಾನ್ಯ ಮತದಾರರು ಮತ್ತು 1,426 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,30,359 ಮತದಾರರು ಇದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,22,283 ಮಂದಿ ಮತದಾರರಿದ್ದಾರೆ ಎಂದರು.
ನಾಮಪತ್ರ ಸಲ್ಲಿಸಲು ಏಪ್ರಿಲ್, 20 ಕೊನೆಯ ದಿನವಾಗಿದೆ. ಏಪ್ರಿಲ್, 21 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಏಪ್ರಿಲ್, 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ. ಮೇ 10 ರಂದು ಮತದಾನ ನಡೆಯಲಿದೆ. ಮೇ, 13 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದ್ದಾರೆ.
‘ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಗೆ (ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ) ನಾಮಪತ್ರ ಸಲ್ಲಿಸಬಹುದಾಗಿದೆ.
ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಗೆ (ವಿರಾಜಪೇಟೆ ತಹಶೀಲ್ದಾರರ ಕಚೇರಿಯಲ್ಲಿ) ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.’
ಚುನಾವಣಾ ಆಯೋಗದ ನಿರ್ದೇಶನದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಆ ನಿಟ್ಟಿನಲ್ಲಿ ವಿವಿಧ ತಂಡಗಳು ಕಾರ್ಯ ನಿರ್ವಹಿಸುತ್ತಿದ್ದು, ಎಂಸಿಸಿ ಇಬ್ಬರು ನೋಡಲ್ ಅಧಿಕಾರಿಗಳು, 44 ಸೆಕ್ಟರ್ ಅಧಿಕಾರಿಗಳು, 14 ಪ್ಲೈಯಿಂಗ್ ಸ್ಕ್ವಾಡ್, 39 ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅವರು ವಿವರಿಸಿದರು.
ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ 40 ಲಕ್ಷ ರೂ. ವರೆಗೆ ಖರ್ಚು ಮಾಡಬಹುದಾಗಿದೆ. ಈ ಹಿನ್ನೆಲೆ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ವಹಿಸಲು ವಿವಿಧ ವೆಚ್ಚ ತಂಡಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಬ್ಬರಂತೆ ಇಬ್ಬರು ಸಹಾಯಕ ವೆಚ್ಚ ವೀಕ್ಷಕರು, ಇಬ್ಬರು ಲೆಕ್ಕ ತಂಡದವರು, ನಾಲ್ಕು ಮಂದಿ ವೀಡಿಯೋ ಸರ್ವಿಲೆನ್ಸ್ ತಂಡ, ಹಾಗೆಯೇ ಇಬ್ಬರು ವಿಡಿಯೋ ವಿವಿಂಗ್ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಜಿಲ್ಲೆಯಲ್ಲಿ ಒಟ್ಟು 542 ಮತಗಟ್ಟೆಗಳಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 269 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳು ಇವೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಒಟ್ಟು 4,52,642 ಮತದಾರರಿದ್ದು, 4,51,216 ಸಾಮಾನ್ಯ ಮತದಾರರು ಮತ್ತು 1,426 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,30,359 ಮತದಾರರು ಇದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,22,283 ಮಂದಿ ಮತದಾರರಿದ್ದಾರೆ ಎಂದರು.
‘ರಾಜಕೀಯ ರ್ಯಾಲಿ, ಸಮಾರಂಭ ಹಾಗೂ ವಾಹನ ಬಳಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪ್ರಚಾರದ ಪ್ರತಿಯೊಂದು ಖರ್ಚನ್ನು ಲೆಕ್ಕ ಇಡಬೇಕು. ಆನ್‍ಲೈನ್ ಮೂಲಕವು ನಾಮಪತ್ರ ಸಲ್ಲಿಸಬಹುದಾಗಿದೆ. ಸ್ಟಾರ್ ಕ್ಯಾಪೈನರ್ ಪ್ರಚಾರ ಮಾಡುವಾಗ ಅಭ್ಯರ್ಥಿ ವೇದಿಕೆಯ ಮೇಲೆ ಇದ್ದರೆ ಅಥವಾ ಬ್ಯಾನರ್‍ನಲ್ಲಿ ಅಭ್ಯರ್ಥಿಯ ಭಾವಚಿತ್ರ ಇದ್ದರೆ ವೆಚ್ಚ ಅಭ್ಯರ್ಥಿಯ ಲೆಕ್ಕಕ್ಕೆ ಹಾಕಲಾಗುತ್ತದೆ. ಕರಪತ್ರಗಳ ಮುದ್ರಣದಲ್ಲಿ ಮುದ್ರಣ ಸಂಖ್ಯೆ ಹಾಗೂ ಮುದ್ರಣದ ವಿಳಾಸ ಕಡ್ಡಾಯವಾಗಿ ಮುದ್ರಿಸಿರಬೇಕು ಎಂದು ಡಾ.ಬಿ.ಸಿ.ಸತೀಶ ಅವರು ನುಡಿದರು.’
ಮತದಾರರ ಸಹಾಯವಾಣಿ: ಚುನಾವಣೆಯ ಅಕ್ರಮಗಳ ಬಗ್ಗೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕರೆ ಮಾಡಬಹುದಾಗಿದೆ.
ಸಿ-ವಿಜಿಲ್: ಭಾರತ ಚುನಾವಣಾ ಆಯೋಗವು c-Vigil ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದ್ದು, ಈ ಅಪ್ಲಿಕೇಷನ್‍ನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಗ್ರಿಗಳನ್ನು, ಮದ್ಯವನ್ನು ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಅಪ್ಲಿಕೇಷನ್‍ನಲ್ಲಿ ವಿಡಿಯೋ ಮತ್ತು ಪೋಟೊಗಳ ಮೂಲಕ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಚುನಾವಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ www.eci.nic.in ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ www.ceokarnataka.kar.nic.in ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್‍ಸೈಟ್: www.kodagu.nic.in ನಲ್ಲಿ ಮಾಹಿತಿಯನ್ನು ಪಡೆಯಬಹುದು.

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚಿನ ತಪಾಸಣೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದ್ದಾರೆ.
ವಿಧಾನಸಭಾ ಚುನಾವಣೆ ಸಂಬಂಧ ಎರಡು ವಿಧಾನಸಭಾ ಕ್ಷೇತ್ರಗಳಿಗೆ ವೆಚ್ಚ, ಸಾಮಾನ್ಯ ಹಾಗೂ ಪೊಲೀಸ್ ವೀಕ್ಷಕರು ನಿಯೋಜನೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.