ಕೊಡಗು ಕಾಂಗ್ರೆಸ್ ಕಾರ್ಯಾಲಯಕ್ಕೆ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು ಭೇಟಿ

ರಾಯಚೂರು,ಜೂ.೧೨-
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎನ್ ಎಸ್ ಬೋಸರಾಜು ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದ ನಂತರ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಸನ್ಮಾನಿಸಿ, ಗೌರವಿಸಿ ಅಭೂತಪೂರ್ವವಾಗಿ ಸ್ವಾಗತಿಸಿದರು. ನಂತರ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ನಿಂದ ಉಸ್ತುವಾರಿ ಸಚಿವರಾದ ಎನ್‌ಎಸ್ ಬೋಸರಾಜು ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಿ ಗೌರವಿಸಿದರು.