ಕೊಪ್ಪಳದಲ್ಲಿ ದುಪ್ಪಟ್ಟಾದ ಕೊರೊನಾ ಸೋಂಕಿತರ ಸಾವು

ಕೊಪ್ಪಳ, ಮೇ ೧೪- ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ, ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ಅಧಿಕವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗ ಕೊರೊನಾ ಅಬ್ಬರಿಸುತ್ತಿದೆ. ಸಾವುಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಉಂಟು ಮಾಡಿದೆ. ಸಾವಿನ ಪ್ರಮಾಣ ಕಡಿಮೆ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕಾಗಿದೆ. ಮೇ ೧ ರಿಂದ ಮೇ ೧೪ ರವರೆಗೂ ಒಟ್ಟು ೫೫೪೭ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಲ್ಲಿ ಮೇ ೧ ರಿಂದ ೧೨ ರವರೆಗೂ ಒಟ್ಟು ೧೦೮ ಜನರು ಉಸಿರು ನಿಲ್ಲಿಸಿದ್ದಾರೆ. ಮೇ ೧೩ ರಂದು ಒಟ್ಟು ೧೫ ಜನರು ಸಾವನ್ನಪ್ಪಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ, ಇಲ್ಲಿ ಬೆಡ್ ಗಳ ಕೊರತೆ ಇದೆ. ಬೆಡ್ ಗಳು ಸಕಾಲಕ್ಕೆ ಸಿಗದೆ ಸೋಂಕಿತರು ಪ್ರಾಣ ಬಿಡುತ್ತಿದ್ದಾರೆ. ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸೋಂಕಿತರಿಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಇದೇ ಕಾರಣಕ್ಕೆ ಸಾವುಗಳು ಅಧಿಕವಾಗಿವೆ ಎಂಬ ಆರೋಪವಿದೆ. ಆದರೆ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು. ಇಲ್ಲಿಯವರೆಗೂ ಜಿಲ್ಲೆಯಲ್ಲಿ ೪೦೬ ಜನರು ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ೨೩೮೭೧ ಜನರಲ್ಲಿ ಸೋಂಕು ದೃಡ ಪಟ್ಟಿದೆ. ಆದರೆ ಸೋಂಕಿತರು ತಡವಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದೇ ಸಾವಿಗೆ ಮುಖ್ಯ ಕಾರಣ ಎಂದು ಕಿಮ್ಸ್ ಆಡಳಿತಾಧಿಕಾರಿಗಳು ಹೇಳಿದ್ದಾರೆ. ಇದೇ ಅಭಿಪ್ರಾಯ ವನ್ನು ಜನಪ್ರತಿನಿಧಿಗಳು ಸಹ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿಯ ಸಾವಿನ ಪ್ರಮಾಣಕ್ಕೆ ಹೊಲಿಸಿದರೆ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ, ಶೇ ೧ ರಷ್ಟು ಮಾತ್ರ ಸಾವಿನ ಪ್ರಮಾಣವಿದೆ. ಕಳೆದ ವರ್ಷ ಸಾವಿನ ಪ್ರಮಾಣ ಶೇ ೨ ರಷ್ಟಿತ್ತು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ. ಜಿಲ್ಲೆಯ ಹಲವರಲ್ಲಿ ಸೋಂಕು ಕಾಣಿಸಿಕೊಂಡ ನಂತರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸ್ಥಳೀಯವಾಗಿ ಮಾತ್ರೆ, ಇಂಜೆಕ್ಷನ್ ಪಡೆದು ಜ್ವರ, ಕೆಮ್ಮು, ನೆಗಡಿಯನ್ನು ಶಮನ ಮಾಡಿಕೊಳ್ಳಲು ಯತ್ನಿಸುತ್ತಾರೆ. ಆದರೆ ಸೋಂಕಿತರು ತೀವ್ರ ಉಸಿರಾಟ ತೊಂದರೆ ಹೆಚ್ಚಾದ ನಂತರ ಆಸ್ಪತ್ರೆಗೆ ದಾಖಲಾಗಿ, ನಂತರದಲ್ಲಿ ಆರೋಗ್ಯದಲ್ಲಿ ತೀವ್ರ ಏರು ಪೇರಾಗಿ ಸಾವನ್ನಪ್ಪುತ್ತಿದ್ದಾರೆ ಎನ್ನಲಾಗುತ್ತದೆ.
ಸೋಂಕಿನ ಲಕ್ಷಣ ಕಂಡ ತಕ್ಷಣವೇ ಜನರು ಆಸ್ಪತ್ರೆಗೆ ದಾಖಲಾಗಬೇಕಾಗಿದೆ. ಈ ಮಧ್ಯೆ ಕೊಪ್ಪಳದಲ್ಲಿ ವೈದ್ಯಕೀಯ ಸೌಲಭ್ಯ ಕಡಿಮೆ ಇರುವುದು ಇತ್ತಿಚಿಗಷ್ಟೆ ಆರೋಗ್ಯ ಸೇವೆಗಳು ಸುಧಾರಿಸುತ್ತಿವೆ. ಇಲ್ಲಿ ಆಸ್ಪತ್ರೆಗಳು, ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಸೌಲಭ್ಯ ಹೆಚ್ಚು ಇಲ್ಲದೆ ಇರುವುದು, ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ವೈದ್ಯರ ಕೊರತೆಯೂ ಇದೆ. ಇನ್ನೂ ಇತ್ತೀಚಿಗೆ ಸೋಂಕಿತರು ಹಾಗು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗಿರುವದರಿಂದ ಒತ್ತಡದಲ್ಲಿ ಆರೋಗ್ಯ ಸಿಬ್ಬಂದಿ ಕೆಲಸ ಮಾಡುತ್ತಿರುವುದು ಸಾವಿಗೆ ಕಾರಣ ಎನ್ನಲಾಗಿದೆ.
ಈಗ ಜಿಲ್ಲೆಯಲ್ಲಿಯ ಕೊರೊನಾ ಸೋಂಕಿತರ ಸಾವು ಸಾಕಷ್ಟು ಆತಂಕ ಮೂಡಿಸಿದೆ. ಈ ಮಧ್ಯೆ ಸಾವಿನ ಪ್ರಮಾಣ ಕಡಿಮೆ ಮಾಡಲು ಹಾಸಿಗೆ ಹೆಚ್ಚಿಸಬೇಕು, ಬೇಗನೆ ಆಸ್ಪತ್ರೆಗೆ ದಾಖಲಾಗಿ ಅವರಿಗೆ ಚಿಕಿತ್ಸೆ ನೀಡಬೇಕಾಗಿರುವುದು ಅವಶ್ಯವಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ, ಇಲ್ಲಿ ಬೆಡ್ ಗಳ ಕೊರತೆ ಇದೆ. ಬೆಡ್ ಗಳು ಸಕಾಲಕ್ಕೆ ಸಿಗದೆ ಸೋಂಕಿತರು ಪ್ರಾಣ ಬಿಡುತ್ತಿದ್ದಾರೆ. ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸೋಂಕಿತರಿಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಇದೇ ಕಾರಣಕ್ಕೆ ಸಾವುಗಳು ಅಧಿಕವಾಗಿವೆ ಎಂಬ ಆರೋಪವಿದೆ.