ಕೊಪ್ಪಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

ಕೊಪ್ಪಳ ಮಾ 31 : ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುವ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶಗಳನ್ನು ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಲ್ಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಅನುಸೂಚಿತ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮಗಳನುಸಾರ ದೌರ್ಜನ್ಯದಿಂದ ಮೃತಪಟ್ಟ ವ್ಯಕ್ತಿಯ ಮೇಲೆ ಅವಲಂಬಿತವಾಗಿರುವ ಕುಟುಂಬ ಒಬ್ಬರಿಗೆ ಸರ್ಕಾರದ ನಿಯಮಾನುಸಾರ ದಾಖಲೆಗಳೊಂದಿಗೆ ಸರ್ಕಾರಿ ಉದ್ಯೋಗ ಒದಗಿಸಲು ಸಂಬಂಧಿಸಿದ ತಾಲೂಕಿನ ಕ್ರಮವಹಿಸಬೇಕು ಪ್ರಕರಣಗಳು ವಿರಳವಾಗಿದ್ದು ಇಂತಹ ವಿರಳ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ಮಾಡಬೇಡಿ ಈ ಕುರಿತು ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು