ಕೊರಗಜ್ಜ ಚಿತ್ರಕ್ಕೆ `ಗೋಪಿ ಸುಂದರ್’ ಸಂಗೀತ

“ಕೊರಗಜ್ಜ” ಚಿತ್ರಕ್ಕೆ ದಕ್ಷಿಣ ಭಾರತದ ಪ್ರಖ್ಯಾತ ಸಂಗೀತ ನಿರ್ದೇಶಕ “ಗೋಪಿ ಸುಂದರ್” ಸಂಗೀತ ನೀಡುತ್ತಿದ್ದಾರೆ.. ಜೊತೆಗೆ ಹಿನ್ನೆಲೆ ಸಂಗೀತ ಕೂಡ ಅವರದ್ದೇ. ಎಲ್ಲಾ ಹಾಡುಗಳನ್ನು ಮತ್ತೆ ಹೊಸದಾಗಿ ಕಂಪೆÇೀಜ್ ಮಾಡುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ತ್ರಿವಿಕ್ರಮ ಸಪಲ್ಯ ನಿರ್ಮಾಣ ಮಾಡಿರುವ ಚಿತ್ರಕ್ಕೆ  ಸುಧೀರ್ ಅತ್ತಾವರ ಆಕ್ಷನ್ ಕಟ್ ಹೇಳಿದ್ದಾರೆ.

ಸುಮಾರು ಎಂಟು ನೂರು ವರ್ಷಗಳ ಹಿಂದಿನ ಕಥೆಯುಳ್ಳ ಸಿನಿಮಾದಲ್ಲಿ ಹಾಲಿವುಡ್,ಬಾಲಿವುಡ್ ಕಲಾವಿದರಾದ ಕಬೀರ್ ಬೇಡಿ, ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ ಜೊತೆ ಶ್ರುತಿ, ಭವ್ಯ ಮೊದಲಾದವರು ಅಭಿನಯಿಸುತ್ತಿದ್ದಾರೆ. ಋತಿಕ ಎನ್ನುವ ಹೊಸ ಮುಖ ಕೊರಗಜ್ಜನ ತಾಯಿ ಕೊರೊಪೆÇಳು ಪಾತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪರಿಚಯ ವಾಗುತ್ತಿದ್ದಾರೆ.

ಉಳಿದಂತೆ  ಜೀತ್ ಜೊಸ್ಸಿ ಮತ್ತು ವಿದ್ಯಾಧರ್ ಶೆಟ್ಟಿ ಸಂಕಲನ, ಮನೋಜ್ ಪಿಳ್ಳೈ ಮತ್ತು ಪವನ್ ವಿ ಛಾಯಾಗ್ರಹಣ, ಸುಧೀರ್ ಅತ್ತಾವರ್ ಕಲಾ ನಿರ್ದೇಶನ, ಬಿಬಿನ್ ದೇವ್ ಸೌಂಡ್ ಡಿಸೈನಿಂಗ್  ಚಿತ್ರಕ್ಕಿದೆ. ಮಾರ್ಚ್ ಕೊನೆಗೆ ಸಿನಿಮಾ ಬಿಡುಗಡೆಗಾಗಿ ತಯಾರಿ ನಡೆದಿದೆ.